71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್'ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್ 
ದೇಶ

71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್'ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್

ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿ, ಬಹು ನಿರೀಕ್ಷಿತ ಪರೇಡ್'ಗೆ ಚಾಲನೆ ನೀಡಿದ್ದಾರೆ. 

ನವದೆಹಲಿ: ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿ, ಬಹು ನಿರೀಕ್ಷಿತ ಪರೇಡ್'ಗೆ ಚಾಲನೆ ನೀಡಿದ್ದಾರೆ. 

ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಬೊಲ್ಸೊನಾರೋ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಬೊಲ್ಸೊನಾರೋ ಅವರನ್ನು ರಾಷ್ಟ್ರಪತಿಗಳು ಆತ್ಮೀಯತೆಯಿಂದ ರಾಜ್'ಪಥಕ್ಕೆ ಬರಮಾಡಿಮಾಡಿಕೊಂಡರು. 

ಇನ್ನು ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಸಿ ಸಲ್ಲಿಸಿದ ಬಳಿಕ ಪ್ರಧಾನಮಂತ್ರಿ ನರೇದ್ರ ಮೋದಿ ಕೂಡ ರಾಜ್'ಪಥಕ್ಕೆ ಆಗಮಿಸಿದ್ದು, ಮೋದಿಯವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಆಗಮಿಸಿದ್ದಾರೆ. 

ಕಾರ್ಯಕ್ರಮದಲ್ಲಿ ಪರೇಡ್ ಕಮಾಂಡರ್, ಲೆಫ್ಟಿನೆಂಟ್ ಜನರಲ್ ಆಸಿತ್ ಮಿಸ್ತ್ರಿ ನೇತೃತ್ವದಲ್ಲಿ ಪರೇಡ್ ನಡೆಯಲಿದ್ದು, ಪರಮ್ ವೀರ್ ಚಕ್ರ ಹಾಗೂ ಅಶೋಕ ಚಕ್ರ ಪ್ರಶಸ್ತಿ ವಿಜೇತರು ಸೇರಿ ಹಲವರು ಭಾಗವಹಿಸಲಿದ್ದಾರೆ. 

ರಾಜ್'ಪಥದಿಂದ ಇಂಡಿಯಾ ಗೇಟ್ ವರೆಗೂ ಸೇನೆಯು ಪರೇಡ್ ನಡೆಸಿದ್ದು, ಈ ಮೂಲಕ ತನ್ನ ಶಕ್ತಿಯನ್ನು ಪ್ರದರ್ಶಿಸಿದೆ. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದ್ದು, ಬೆಳಿಗ್ಗೆ 10 ಗಂಟೆಯಿಂದ ಪಥಸಂಚಲನ ಆರಂಭಗೊಂಡಿದೆ. ಈ ಬಾರಿ ಪಥಸಂಚಲನದಲ್ಲಿ ಒಟ್ಟು 22 ಸ್ತಬ್ಧ ಚಿತ್ರಗಳು ಸಾಗಲಿದ್ದು, 16 ರಾಜ್ಯಗಳ ಸ್ತಬ್ಧಚಿತ್ರ ಹಾಗೂ 6 ಕೇಂದ್ರ ಸರ್ಕಾರದ ವಿವಿಧ ಸ್ತಬ್ಧ ಚಿತ್ರ ರಾಜ್ ಪಥದಲ್ಲಿ ಸಾಗಲಿದೆ. 

ಭಾರತೀಯ ಸೇನೆಯ ಕ್ಷಿಪಣಿಗಳು, ಕ್ಷಿಪಣಿ ವಾಹನಗಳು, ವೀರ ಯೋಧರ ಸಾಹಸ ಪ್ರದರ್ಶನಗಳ ಜೊತೆಗೆ ಭಾರತೀಯ ಸೇನೆಗೆ ಇತ್ತೀಚೆಗಷ್ಟೇ ಸೇರ್ಪಡೆಗೊಂಡಿದ್ದ ಚಿನೂಕ್ ಹಾಗೂ ಅಪಾಚೆ ಹೆಲಿಕಾಪ್ಟರ್ ಗಳು ಆಗಸದಲ್ಲಿ ತನ್ನ ಕಸರತ್ತನ್ನು ಪ್ರದರ್ಶಿಸಲಿದವೆ. ಭೀಷ್ಮ ಟ್ಯಾಂಕರ್ ರಾಜಪಥದಲ್ಲಿ ಘರ್ಜಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT