ದೇಶ

ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ, ಕೋರ್ಟ್ ಮೆಟ್ಟಿಲೇರುತ್ತೇನೆ: ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

Lingaraj Badiger

ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ನರೇಂದ್ರ ಮೋದಿ  ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ತೀವ್ರವಾಗಿ ವಿರೋಧಿಸಿದ್ದು, ಇದು ದೇಶ ವಿರೋಧಿ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏರ್ ಇಂಡಿಯಾ ಮಾರಾಟಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ವಿರುದ್ದ ಕಾನೂನು ಹೋರಾಟ ಮಾಡುವುದಾಗಿ ಸ್ವಾಮಿ ಬೆದರಿಕೆ ಹಾಕಿದ್ದಾರೆ.

ಏರ್ ಇಂಡಿಯಾದಲ್ಲಿ ಹೊಂದಿರುವ ಎಲ್ಲ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ. ಏರ್ ಇಂಡಿಯಾ ಖರೀದಿಸಲು ಇಚ್ಚಿಸುವವರು ಮಾರ್ಚನಲ್ಲಿ ಇ - ಬಿಡ್ ಸಲ್ಲಿಸಬೇಕು ಎಂದು ಸರ್ಕಾರ ಗಡುವು ನೀಡಿದೆ. 

ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್  ಸಹ ಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದು, ಇದರ ವಿರುದ್ದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಕೇಂದ್ರ ಸರ್ಕಾರದ ಬಳಿ ಹಣ ಇಲ್ಲ. ಸಂಪೂರ್ಣ ದಿವಾಳಿಯಾಗಿದೆ. ಹೀಗಾಗಿ ಏರ್ ಇಂಡಿಯಾ ಮಾರಾಟಕ್ಕೆ ಮುಂದಾಗಿದೆ ಎಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಆರೋಪಿಸಿದ್ದಾರೆ.

SCROLL FOR NEXT