ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ 
ದೇಶ

ಹೈದ್ರಾಬಾದ್: ಸಿಎಎ ವಿರೋಧಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಅಜಾದ್ ಬಂಧನ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಅವರನ್ನು ಹೈದ್ರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಹೈದ್ರಾಬಾದ್ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲು ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಅವರನ್ನು ಹೈದ್ರಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲು ಅನುಮತಿ ನಿರಾಕರಿಸಿದ ಪೊಲೀಸರು, ಅಜಾದ್ ಹಾಗೂ ಅವರ ಬೆಂಬಲಿಗರನ್ನು ಬಂಧಿಸಿ, ಪ್ರಮುಖ ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಿದರು.

ಅಖಿಲ ಭಾರತ ದಲಿತ ಮುಸ್ಲಿಂ ಆದಿವಾಸಿ ಪ್ರಗತಿಪರರ ವೇದಿಕೆ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಷಣ ಮಾಡಲು ಚಂದ್ರಶೇಖರ್ ಅಜಾದ್ ಮೆಹಂದಿಪಟ್ಟಣಂ ಕಡೆಗೆ ತೆರಳುತ್ತಿದ್ದರು.

ಮೊದಲಿಗೆ ಅಜಾದ್ ಅವರನ್ನು ಹಬೀಬ್ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿಗೆ ಧಾವಿಸಿದ ಅಜಾದ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ನಗರದ ಹೊರವಲಯ ಬೊಲಾರಾಮ್ ಠಾಣೆ ನಂತರ ಗೋಶಾಮಹಲ್ ಠಾಣೆಗೆ ಕರೆದೊಯ್ಯಲಾಯಿತು.

ಇದಕ್ಕೂ ಮುಂಚೆ ಪೊಲೀಸರು ಅನೇಕ ಅಜಾದ್ ಬೆಂಬಲಿಗರನ್ನು ವೇದಿಕೆ ಬಳಿ ಬಂಧಿಸಿದ್ದರು. ಇದೇ ವೇದಿಕೆಯಲ್ಲಿ ಜನವರಿ 13ರಂದು ಆಯೋಜಿಸಲಾಗಿದ್ದ ಕನ್ಹಯ್ಯ ಕುಮಾರ್ ಭಾಷಣ ಕಾರ್ಯಕ್ರಮಕ್ಕೂ ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು. 

ತಿಹಾರ್ ಸೆಂಟ್ರಲ್ ಜೈಲಿನಿಂದ ಜಾಮೀನಿನ ಮೇರೆಗೆ ಹೊರಗೆ ಬಂದ 10 ದಿನಗಳ ನಂತರ ಮತ್ತೆ ಚಂದ್ರಶೇಖರ್ ಅಜಾದ್ ಬಂಧನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ