ಮಾ 17 ರಂದು ಪ್ರಧಾನಿ  ಮೋದಿ ಬಾಂಗ್ಲಾ ಪ್ರವಾಸ 
ದೇಶ

ಮಾ 17 ರಂದು ಪ್ರಧಾನಿ  ಮೋದಿ ಬಾಂಗ್ಲಾ ಪ್ರವಾಸ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ  ಬರುವ  ಮಾರ್ಚ್ 17ರಂದು ಬಾಂಗ್ಲಾದೇಶ  ಪ್ರವಾಸ  ಕೈಗೊಳ್ಳಲಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ  ಬರುವ  ಮಾರ್ಚ್ 17ರಂದು ಬಾಂಗ್ಲಾದೇಶ  ಪ್ರವಾಸ  ಕೈಗೊಳ್ಳಲಿದ್ದಾರೆ.

ಬಂಗಬಂಧು ಶೇಖ್ ಮುಜೀಬುರ್ರಹ್ಮಾನ್ ಜನ್ಮಶತಮಾನೋತ್ಸವಕ್ಕೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಉನ್ನತ  ಮೂಲಗಳು ಹೇಳಿವೆ. 

ಉಭಯ ದೇಶಗಳ ನಡುವಿನ ಆತ್ಮೀಯ ದ್ವಿಪಕ್ಷೀಯ ಸಂಬಂಧವನ್ನು ಬಿಂಬಿಸುವುದು ಇದರ ಉದ್ದೇಶವಾಗಿದೆ ಕಾರ್ಯಕ್ರಮದ ಹಿಂದಿನ ದಿನವೇ ಢಾಕಾ ತಲುಪಲಿರುವ ಮೋದಿ, ಬಾಂಗ್ಲಾದೇಶದ ಸಂಸ್ಥಾಪಕ ಮುಜೀಬುರ್ರಹ್ಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಲಿದ್ದಾರೆ. 

ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸಂಘರ್ಷ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭೇಟಿ ಕುತೂಹಲ ತೀವ್ರ ಕೆರಳಿಸಿದೆ. ಭಾರತದ ಸಂಸತ್ತು ಪೌರತ್ವ ತಿದ್ದುಪಡಿ ಕಾಯ್ದೆ ಅನುಮೋದನೆ ಪಡೆದ ನಂತರ ಬಾಂಗ್ಲಾದೇಶದ ಮೂವರು ಸಚಿವರು ಭಾರತ ಪ್ರವಾಸ ರದ್ದುಪಡಿಸಿದ್ದಾರೆ. ಆದರೆ ಸಿಎಎ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಗಲ್ಫ್ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ