ದೇಶ

ಆಲಿಘರ್ ಮುಸ್ಲಿಂ ವಿವಿಯಲ್ಲಿ ಪ್ರಚೋದನಾಕಾರಿ ಹೇಳಿಕೆ: ಡಾ. ಕಫೀಲ್ ಖಾನ್ ಬಂಧನ

Nagaraja AB

ಲಖನೌ:  ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ.

ಐಪಿಸಿ ಸೆಕ್ಷನ್ 153 ಎ ಅಡಿಯಲ್ಲಿ ಡಾ. ಕಫೀಲ್ ಖಾನ್ ವಿರುದ್ಧ ಡಿಸೆಂಬರ್ 13 ರಂದು ಅಲಿಘರ್ ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

ಆಲಿಘರ್ ವಿಶ್ವವಿದ್ಯಾಲಯದಲ್ಲಿ ಸುಮಾರು 600 ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಿದ ಡಾ. ಕಫೀಲ್ ಖಾನ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಫ್ ಐಆರ್ ನಲ್ಲಿ ಆರೋಪಿಸಲಾಗಿದೆ. 

SCROLL FOR NEXT