ದೇಶ

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಲು ಉದ್ಧವ್ ಠಾಕ್ರೆ ಸರ್ಕಾರ ಸಜ್ಜು!?

Srinivas Rao BV

ಮುಂಬೈ: ಶೇ.70 ರಷ್ಟು ಮೀಸಲಾತಿ ನಿಯಮವನ್ನು ಗಾಳಿಗೆ ತೂರಿರುವ ಮಹಾರಾಷ್ಟ್ರದಲ್ಲಿ ಈಗ ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರ ಮುಸ್ಲಿಂ ಮೀಸಲಾತಿ ಘೋಷಿಸಲು ಚಿಂತನೆ ನಡೆಸಿದೆ. 
 
ಎನ್ ಸಿಪಿ ಹಾಗೂ ಕಾಂಗ್ರೆಸ್ ಪ್ರಣಾಳಿಕೆಗಳಲ್ಲಿ ಮುಸ್ಲಿಂ ಮೀಸಲಾತಿ ಬಗ್ಗೆ ಭರವಸೆ ನೀಡಲಾಗಿತ್ತು. 2019 ರಲ್ಲಿ ಮರಾಠ ಹೋರಾಟದ ನಂತರ ಮಹಾರಾಷ್ಟ್ರ ಸರ್ಕಾರ, ಸಾಮಾಜಿಕ, ಆರ್ಥಿಕ ಹಿಂದುಳಿದ ಕಾಯ್ದೆಗೆ ತಿದ್ದುಪಡಿ ತಂದು ಆರ್ಥಿಕವಾಗಿ ಹಿಂದುಳಿದವರಿಗೆ ವಿವಿಗಳಲ್ಲಿ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.16 ರಷ್ಟು ಮೀಸಲಾತಿ ಘೋಷಿಸಿತ್ತು. ಸರ್ಕಾರದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. 

ಈ ನಂತರ ಸಮ್ಮಿಶ್ರ ಸರ್ಕಾರ ಈಗ ಮುಸ್ಲಿಂ ಮೀಸಲಾತಿಯನ್ನು ಸಾಮಾನ್ಯ ಕನಿಷ್ಠ ಕಾರ್ಯಕ್ರಮ (Common Minimum Programme)ದ ಅಡಿಯಲ್ಲಿ ಜಾರಿಗೆ ತರಲು ಉದ್ದೇಶಿಸಿದೆ.

SCROLL FOR NEXT