ಸಂಗ್ರಹ ಚಿತ್ರ 
ದೇಶ

ಕೊರೋನಾ ವೈರಸ್: ನಟ ಅಮೀರ್ ಖಾನ್ ತಾಯಿ ವರದಿ ನೆಗೆಟಿವ್!

ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಮುಂಬೈ: ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಕೊರೋನಾ ವೈರಸ್ ಗೆ ನಟ ಅಮೀರ್ ಖಾನ್ ಅವರ ಮನೆ ಕೆಲಸದ ವ್ಯಕ್ತಿ ತುತ್ತಾದ ಬೆನ್ನಲ್ಲೇ ಅಮೀರ್ ಖಾನ್ ಅವರ ತಾಯಿಯನ್ನೂ ಕೋವಿಡ್-19 ಪರೀಕ್ಷೆಗೊಳಪಡಿಸಲಾಗಿತ್ತು. ಇದರ ವರದಿ ಇದೀಗ ಬಂದಿದ್ದು, ವರದಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ನಟ ಅಮೀರ್ ಖಾನ್ ಅವರು ಟ್ವೀಟ್ ಮಾಡಿದ್ದು, ನಾನಗೆ ತುಂಬಾ ಸಮಾಧಾನ ಲಭಿಸಿದ್ದು, ನನ್ನ ತಾಯಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ.

'ಎಲ್ಲರಿಗೂ ನಮಸ್ತೆ, ನನ್ನ ತಾಯಿಯ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ನನ್ನ ಹಾಗೂ ನನ್ನ ಕುಟುಂಬಸ್ಥರ ಸುರಕ್ಷತೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ನಾನು ಚಿರಋಣಿಯಾಗಿದ್ದೇನೆ. ನಿಮ್ಮ ಹಾರೈಕೆ ಮತ್ತು ಆಶೀರ್ವಾದ ನಮ್ಮ ಮೇಲೆ ಹೀಗೆಯೇ ಇರಲಿ ಎಂದು ಅಮೀರ್ ಖಾನ್ ಮನವಿ ಮಾಡಿದ್ದಾರೆ.

ಈ ಹಿಂದೆ ಅಮೀರ್ ಖಾನ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಸೋಂಕು ಒಕ್ಕರಿಸಿತ್ತು. ಹೀಗಾಗಿ ಇಡೀ ಕುಟುಂಬ ಕ್ವಾರಂಟೈನ್ ನಲ್ಲಿತ್ತು. ಬಿಎಂಸಿ ಅಧಿಕಾರಿಗಳು ಅಮೀರ್ ಖಾನ್ ಅವರ ಮನೆಯಲ್ಲಿ ಸ್ಯಾನಿಟೈಸೇಷನ್ ಮಾಡಿದ್ದರು. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಅಮೀರ್ ಖಾನ್ ಅವರು ತಮ್ಮ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೊಳಪಡಿಸಿದ್ದು, ಈ ಪೈಕಿ ಅಮೀರ್ ಖಾನ್ ಅವರ ತಾಯಿ ಜೀನತ್ ಹುಸೇನ್ ಅವರ ವರದಿ ನೆಗೆಟಿವ್ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ