ರಾಹುಲ್ ವಿಡಿಯೋ ಸಂವಾದ 
ದೇಶ

ಕೇಂದ್ರ ಸರ್ಕಾರ ಕೊರೋನಾ ಸ್ಥಿತಿ ಅಷ್ಟು ಕೆಟ್ಟದಾಗಿಲ್ಲ ಎಂದು ಬಿಂಬಿಸುತ್ತಿದೆ: ರಾಹುಲ್ ಗಾಂಧಿ

ಕೊರೋನಾ ವೈರಸ್ ಹರಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಮ್ಮ ತಿಳುವಳಿಕೆಯನ್ನೇ ನಿಯಂತ್ರಿಸಲು ಯತ್ನಿಸುತ್ತಿದೆ ಮತ್ತು ಕೊವಿಡ್-19 ಸ್ಥಿತಿ ಅಷ್ಟು ಕೆಟ್ಟದಾಗಿಲ್ಲ ಎಂದು ಬಿಂಬಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ಕೊರೋನಾ ವೈರಸ್ ಹರಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನಮ್ಮ ತಿಳುವಳಿಕೆಯನ್ನೇ ನಿಯಂತ್ರಿಸಲು ಯತ್ನಿಸುತ್ತಿದೆ ಮತ್ತು ಕೊವಿಡ್-19 ಸ್ಥಿತಿ ಅಷ್ಟು ಕೆಟ್ಟದಾಗಿಲ್ಲ ಎಂದು ಬಿಂಬಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.

ಇಂದು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ವಿಶ್ವದ ವಿವಿಧ ದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯ ಮೂಲದ ನರ್ಸ್‌ಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ರಾಹುಲ್ ಗಾಂಧಿ, ಕೊರೋನಾ ಸಮಸ್ಯೆಯನ್ನು ಒಪ್ಪಿಕೊಳ್ಳುವುದು ಮತ್ತು ಅದರ ವಿರುದ್ಧ ಹೋರಾಡುವುದು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ.

ವೈದ್ಯಕೀಯ ಸಿಬ್ಬಂದಿಯನ್ನು "ಅಹಿಂಸಾತ್ಮಕ ಸೈನ್ಯ" ಎಂದು ಬಣ್ಣಿಸಿದ ರಾಹುಲ್ , ಕೊರೋನಾ ವೈರಸ್ ಸಾಂಕ್ರಾಮಿಕ ರೋಗದಿಂದ ಜನರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಅವರು ಹೋರಾಡುತ್ತಾರೆ ಎಂದರು. 

ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ವೈದ್ಯಕೀಯ ಸಮುದಾಯ ನಡೆಸುತ್ತಿರುವ ಹೋರಾಟ ಮತ್ತು ಎದುರಿಸುತ್ತಿರುವ ಆತಂಕಗಳ ಕುರಿತು ರಾಹುಲ್ ಗಾಂಧಿ ನರ್ಸ್‌ಗಳೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮೊಂದಿಗೆ ಇರುವುದಾಗಿ ನರ್ಸ್ ಗಳಿಗೆ ಅಭಯ ನೀಡಿದರು.

ಈ ವೇಳೆ ಮಾತನಾಡಿದ ಆಸ್ಟ್ರೆಲೀಯಾದ ಸೌತ್ ವೇಲ್ಸ್‌ನ ಆಸ್ಪತ್ರೆಯೊಂದರಲ್ಲಿ ನರ್ಸ್‌ ಆಗಿರುವ ರಾಜಸ್ಥಾನ ಮೂಲದ ನರೇಂದ್ರ ಸಿಂಗ್, ಕೊರೋನಾ ವೈರಸ್ ಹಾವಳಿ ಆರಂಭದ ದಿನಗಳಲ್ಲಿ ನಾವು ಇದನ್ನೊಂದು ಸಾಮಾನ್ಯ ವೈರಾಣು ಎಂದು ಬಗೆದಿದ್ದೇವು. ಆದರೆ ನಂತರದ ದಿನಗಳಲ್ಲಿ ಇದರ ಭೀಕರತೆಯ ಅರಿವಾಯಿತು ಎಂದು ಹೇಳಿದರು.

ಅದರಂತೆ ನ್ಯೂಜಿಲೆಂಡ್‌ನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿರುವ ಅನು ರಗ್ನಾತ್ ಎಂಬುವರು, ನ್ಯೂಜಿಲೆಂಡ್ ಕೊರೋನಾ ವೈರಸ್ ಹಾವಳಿಯನ್ನು ನಿಯಂತ್ರಿಸಿದ ರೀತಿಯನ್ನು ವಿವರಿಸಿದರು.

ಇನ್ನು ದೆಹಲಿಯ ಏಮ್ಸ್ ಆಸ್ಪತ್ರೆಯ ನರ್ಸ್ ವಿಪಿನ್ ಕೃಷ್ಣನ್ ಮಾತನಾಡಿ, ದೇಶದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯ ನಡುವೆ ವೇತನ ತಾರತಮ್ಯ ಹೆಚ್ಚಿದ್ದು, ಇದನ್ನು ಕಡಿಮೆ ಮಾಡುವತ್ತ ಸರ್ಕಾರಗಳು ಗಮನಹರಿಸಬೇಕಿದೆ ಎಂದು ಸಲಹೆ ನೀಡಿದರು. ಅಲ್ಲದೇ ಖಾಸಗಿ ಆಸ್ಪತ್ರೆಗಳು ನರ್ಸ್‌ಗಳ ವೇತನ ಕಡಿತ ಮಾಡುತ್ತಿರುವುದರತ್ತಲೂ ಅವರು ಗಮನ ಸೆಳೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT