ದೇಶ

ಹೆದ್ದಾರಿ ಯೋಜನೆಗಳಿಂದ ಚೀನಾದ ಕಂಪನಿಗಳನ್ನು ಭಾರತವು ನಿಷೇಧಿಸಲಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Vishwanath S

ನವದೆಹಲಿ: ಜಂಟಿ ಉದ್ಯಮಗಳು ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮೈಕ್ರೋ, ಸ್ಮಾಲ್ ಮತ್ತು ಮೀಡಿಯಂ ಎಂಟರ್‌ಪ್ರೈಸಸ್(ಎಂಎಸ್‌ಎಂಇ) ನಂತಹ ವಿವಿಧ ಕ್ಷೇತ್ರಗಳಲ್ಲಿ ಚೀನಾದ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡುವುದಿಲ್ಲವೆಂದು ಸರ್ಕಾರ ಖಚಿತಪಡಿಸುತ್ತದೆ ಎಂದು ಗಡ್ಕರಿ ಹೇಳಿದ್ದಾರೆ. 

ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಕೇಂದ್ರ ಸರ್ಕಾರವು ಸೋಮವಾರ ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿದೆ. ಜೊತೆಗೆ ಚೀನಾದ ಲಿಂಕ್‌ಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಕೇಂದ್ರ ಸರ್ಕಾರ ಕಾರಣ ನೀಡಿದೆ. 

ರಸ್ತೆ ನಿರ್ಮಾಣಕ್ಕಾಗಿ ಚೀನಾದ ಪಾಲುದಾರರನ್ನು ಹೊಂದಿರುವ ಜಂಟಿ ಉದ್ಯಮಗಳಿಗೆ ನಾವು ಅನುಮತಿ ನೀಡುವುದಿಲ್ಲ. ಚೀನೀ ಕಂಪನಿಗಳು ನಮ್ಮ ದೇಶದಲ್ಲಿ ಜಂಟಿ ಉದ್ಯಮದ ಮೂಲಕ ಬಂದರೆ ನಾವು ಅದನ್ನು ಅನುಮತಿಸುವುದಿಲ್ಲ ಎಂದು ನಾವು ದೃಢವಾ ನಿಲುವನ್ನು ತೆಗೆದುಕೊಂಡಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.

ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರು 20 ಮಂದಿ ಭಾರತೀಯ ಯೋಧರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಚೀನಾ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ. 

SCROLL FOR NEXT