ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 19,148 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 6.04 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,148 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,148 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಇನ್ನು ಒಂದೇ ದಿನ ಮಹಾಮಾರಿ ವೈರಸ್'ಗೆ 434 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 17834ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ 6,04,641 ಸೋಂಕಿತರ ಪೈಕಿ 3,59,860ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,26,947 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ. 

ಇನ್ನು ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 5537 ಹೊಸ ಕೊರೋನಾ ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,80,298ಕ್ಕೆ ಏರಿಕೆಯಾಗಿದೆ. 

ತಮಿಳುನಾಡು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,049, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 89,802ಕ್ಕೆ ತಲುಪಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ