ಜ್ಯೋತಿರಾದಿತ್ಯ ಸಿಂಧಿಯಾ 
ದೇಶ

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್

ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಭೂಪಾಲ್: ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಇಂದು ಬೆಳಗ್ಗೆ  ಮಧ್ಯಪ್ರದೇಶ ಸಂಪುಟ ವಿಸ್ತರಣೆಯಾಗಿದ್ದು, ಶಿವರಾಜ್ ಸಿಂಗ್ ಚೌಹಾಣ್ 28 ಮಂದಿ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ದಿಗ್ವಿಜಯ್ ಸಿಂಗ್ ಅಥವಾ ಕಮಲನಾಥ್ ಅವರಿಂದ ನನಗೆ ಯಾವುದೇ ಪ್ರಮಾಣ ಪತ್ರ ಬೇಕಾಗಿಲ್ಲ, ಕಳೆದ 15 ತಿಂಗಳಲ್ಲಿ ಅವರು ರಾಜ್ಯವನ್ನು ಯಾವು ರೀತಿ ಕೊಳ್ಳೆ ಹೊಡೆದಿದ್ದಾರೆ ಎಂಬ ಬಗ್ಗೆ ಜನರಿಗೆ ತಿಳಿದಿದೆ. ಅವರಿಗೋಸ್ಕರ ಅವರಿಬ್ಬರು ಎಲ್ಲವನ್ನು ಮಾಡಿದ್ದಾರೆ, ಅವರು ನೀಡಿದ್ದ ಭರವಸೆಗಳನ್ನು ಜನ ಪರಿಶೀಲನೆ ಮಾಡಲಿದ್ದಾರೆ,  ನಾನು ಬೇರೆ ಏನು
ಮಾತನಾಡುವುದಿಲ್ಲ ಟೈಗರ್ ಅಭಿ ಜಿಂದಾ ಹೈ ಎಂದು ಮಾತ್ರ ಹೇಳುತ್ತೇನೆ ಎಂದಿದ್ದಾರೆ.

ಕ್ಯಾಬಿನೆಟ್ ನಾಯಕರ ತಂಡವಲ್ಲ ಆದರೆ ಅದು ಜನರ ತಂಡವಾಗಿದೆ ಮತ್ತು ಅವರಿಗೆ ಸೇವೆ ಸಲ್ಲಿಸುತ್ತದೆ ಎಂದು ಸಿಂಧಿಯಾ ಹೇಳಿದ್ದರು.

ಅವರು ಸರ್ಕಾರದ ಸಚಿವರಲ್ಲ, ಜನರ ಸೇವಕರು, ಸಮಾಜದ ಕೊನೆಯ ವ್ಯಕ್ತಿಗೂ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಮುಂದಿನ 100 ದಿನಗಳಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಕೊರೋನಾ ವಿರುದ್ಧ ಹೋರಾಡಲಿದೆ, ರೈತರಿಗೆ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!