363 ಕೈದಿಗಳು, 102 ಜೈಲು ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್: ಮಹಾರಾಷ್ಟ್ರ ಕಾರಾಗೃಹ ಇಲಾಖೆ
ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.
ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಮಾರಿ ಕೋವಿಡ್-19 ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಈವರೆಗೂ 4 ಮಂದಿ ಖೈದಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.
363 ಕೈದಿಗಳು ಹಾಗೂ 102 ಜೈಲು ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪ್ಟಟಿದೆ ಎಂದು ಮಹಾರಾಷ್ಟ್ರ ಕಾರಾಗೃಹ ಇಲಾಖೆ ತಿಳಿಸಿದೆ.
ಮುಂಬೈ ಸೆಂಟ್ರಲ್ ಜೈಲಿನಲ್ಲಿ ಗರಿಷ್ಠ 181 ಕೈದಿಗಳು ಹಾಗೂ 44 ಜೈಲು ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಈವರೆಗೂ 255 ಕೈದಿಗಳು ಮತ್ತು 82 ಜೈಲು ಸಿಬ್ಬಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.