ದೇಶ

ಜುಲೈ 31ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

Lingaraj Badiger

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ತಿಳಿಸಿದೆ.

ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.

ವಂದೇ ಭಾರತ್ ಮಿಷನ್ ಅಡಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲಾಗುತ್ತಿದೆ. ಈ ವಿಮಾನಗಳ ಹಾರಾಟಕ್ಕೆ ಅನುಮತಿ ಇದೆ.

SCROLL FOR NEXT