ಐಜಿ ಮೊಹಿತ್ ಅಗರ್ವಾಲ್ 
ದೇಶ

ಕಾನ್ಪುರ ಎನ್ ಕೌಂಟರ್ ನಲ್ಲಿ ಇಬ್ಬರು ಕ್ರಿಮಿನಲ್ ಗಳ ಹತ್ಯೆ: ಐಜಿ ಮೋಹಿತ್ ಅಗರ್ವಾಲ್

ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಕಾನ್ಪುರ(ಉತ್ತರ ಪ್ರದೇಶ):ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋಗಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಕ್ರಿಮಿನಲ್ ಗಳನ್ನು ಹತ್ಯೆಗೈಯಲಾಗಿದೆ ಎಂದು ಕಾನ್ಪುರ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ವಾಲ್ ತಿಳಿಸಿದ್ದಾರೆ.

ಇಂದು ಮಧ್ಯರಾತ್ರಿ ನಡೆದ ಎನ್ ಕೌಂಟರ್ ನಲ್ಲಿ 8 ಮಂದಿ ಪೊಲೀಸರು ಹುತಾತ್ಮರಾದ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಇಬ್ಬರು ಕ್ರಿಮಿನಲ್ ಗಳನ್ನು ಹತ್ಯೆ ಮಾಡಲಾಗಿದೆ. ಆ ವೇಳೆ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

ಘಟನೆ ಬಗ್ಗೆ ಖೇದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹುತಾತ್ಮ ಪೊಲೀಸರ ಬಲಿದಾನವನ್ನು ಉತ್ತರ ಪ್ರದೇಶ ಎಂದಿಗೂ ಮರೆಯುವುದಿಲ್ಲ. ಬಹಳ ಧೈರ್ಯದಿಂದ ಪೊಲೀಸರು ತಮ್ಮ ಕರ್ತವ್ಯ ನಡೆಸಿದ್ದರು. ಅವರ ಬಲಿದಾನ ನಿಷ್ಟ್ರಯೋಜಕವಾಗಲು ಬಿಡುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT