ಅಮರನಾಥ ಗುಹೆ 
ದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹಾಲಿಂಗ ಆರತಿಯ ನೇರ ಪ್ರಸಾರಕ್ಕೆ ವ್ಯವಸ್ಥೆ!

ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಕಾಶ್ಮೀರ: ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಯಾತ್ರಾರ್ಥಿಗಳಿಗೆ ನಿರ್ಬಂಧ ವಿಧಿಸಿರುವುದರಿಂದ ಅಮರನಾಥ ದೇವಾಲಯ ಮಂಡಳಿ, ಅಮರನಾಥ ಗುಹೆಯ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಡಿಡಿ ವಾಹಿನಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ನಡೆಸಿದೆ.

ಈ ಹಿಂದಿನ ಯೋಜನೆಯ ಪ್ರಕಾರ ಜಮ್ಮು-ಕಾಶ್ಮೀರ ಆಡಳಿತ ಅಮರನಾಥ ಯಾತ್ರೆಯ ವೇಳೆ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಟ್ವಿನ್ ಟ್ರ್ಯಾಕ್ ನ ಅನಂತ್ ನಾಗ್ ನ ಪಹಲ್ಗಾಮ್ ಹಾಗೂ ಗಂದೇರ್‌ಬಾಲ್‌ ಜಿಲ್ಲೆಯ ಬಲ್ಟಾಲ್ ನ ಮೂಲಕ ಜೂ.23 ರಿಂದ ಯಾತ್ರಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು. ಆಷಾಢ ಪೂರ್ಣಿಮೆಯ ದಿನದಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಜಿಸಿ ಮುರ್ಮು ಅಮರನಾಥ ಗುಹೆಯಲ್ಲಿ ಪ್ರಥಮ ಆರತಿಯನ್ನು ನೆರವೇರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!