ದೇಶ

65ಕ್ಕಿಂತ ಹಿರಿಯರಿಗೆ ಅಂಚೆ ಮತದಾನ ನಿರ್ಧಾರ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಟಿಎಂಸಿ ಆಗ್ರಹ

Lingaraj Badiger

ಕೋಲ್ಕತಾ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಚುನಾವಣೆ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಇದಕ್ಕೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ತೀವ್ರ ವಿರೋಧ ವ್ಯಕ್ತಪಡಿಸಿದ್ದು, 65ಕ್ಕಿಂತ ಹಿರಿಯರಿಗೆ ಅಂಚೆ ಮತದಾನ ನಿರ್ಧಾರ ಹಿಂಪಡೆಯುವಂತೆ ಸೋಮವಾರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಟಿಎಂಸಿ, ಇದೊಂದು  "ಅನಿಯಂತ್ರಿತ ಮತ್ತು ಅಸಂವಿಧಾನಿಕ" ಎಂದಿದೆ. ಅಲ್ಲದೆ ಇದು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.

"65 ವರ್ಷ ಮೇಲ್ಪಟ್ಟವರು ಅಂಚೆ ಮೂಲಕ ಮತದಾನ ಮಾಡಬೇಕು ಎಂಬುದುಅನಿಯಂತ್ರಿತ, ದುರುದ್ದೇಶದ, ಅಸಂವಿಧಾನಿಕ ಮತ್ತು ಗೌಪ್ಯ ಮತದಾನದ ಹಕ್ಕಿನ ಉಲ್ಲಂಘನೆಯಾಗಲಿದೆ.  ಇದು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಹಕ್ಕು ಮತ್ತು ಆರೋಗ್ಯದ ಹಕ್ಕಿನ ಉಲ್ಲಂಘನೆ ಎಂದು ನಾವು ಪರಿಗಣಿಸುತ್ತೇವೆ" ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಸುಬ್ರತಾ ಬಕ್ಷಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳುವಂತೆ ನಮ್ಮ ಪಕ್ಷವು ಮಾನ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದ್ದಾರೆ.

SCROLL FOR NEXT