ಪ್ರಧಾನಿ ನರೇಂದ್ರ ಮೋದಿ 
ದೇಶ

ಕೊರೋನಾ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ: ಪ್ರಧಾನಿ ಮೋದಿ

ಇಡೀ ವಿಶ್ವವೇ ಕೊರೋನಾ ಸಂಕಷ್ಟದಿಂದ ತತ್ತರಿಸಿ ಪುನರುಜ್ಜೀವನಕ್ಕೆ ಮುಂದಾಗುತ್ತಿರುವ ಸಂದರ್ಭದಲ್ಲಿ, ಭಾರತ ಆರ್ಥಿಕತೆ ಸೇರಿದಂತೆ ಎಲ್ಲ ಸವಾಲುಗಳಿಂದ ಸಹಜವಾಗಿ ಹೊರಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಇಡೀ ವಿಶ್ವವೇ ಕೊರೋನಾ ಸಂಕಷ್ಟದಿಂದ ತತ್ತರಿಸಿ ಪುನರುಜ್ಜೀವನಕ್ಕೆ ಮುಂದಾಗುತ್ತಿರುವ ಸಂದರ್ಭದಲ್ಲಿ, ಭಾರತ ಆರ್ಥಿಕತೆ ಸೇರಿದಂತೆ ಎಲ್ಲ ಸವಾಲುಗಳಿಂದ ಸಹಜವಾಗಿ ಹೊರಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಕೊವಿಡ್ ಲಸಿಕೆ ಕಂಡುಹಿಡಿದ ನಂತರ ಅದನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸುಧಾರಣೆ ಮತ್ತು ಪುನರುಜ್ಜೀವನಗೊಳಿಸುವ ದೇಶದ ಸಾಮರ್ಥ್ಯದ ಬಗ್ಗೆ ಅದಮ್ಯ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, ಭಾರತೀಯರು ನೈಸರ್ಗಿಕ ಸುಧಾರಕರು. ಸಾಮಾಜಿಕ ಅಥವಾ ಆರ್ಥಿಕತೆ ಸೇರಿದಂತೆ ಭಾರತವು ಪ್ರತಿ ಸವಾಲನ್ನು ಜಯಿಸಿದೆ ಎಂದು ಇತಿಹಾಸವು ತೋರಿಸಿದೆ ಎಂದಿದ್ದಾರೆ. 

ಇಂಡಿಯಾ ಗ್ಲೋಬಲ್ ವೀಕ್‍ 2020 ಉದ್ಘಾಟಿಸಿ ಮಾತನಾಡಿದ ಮೋದಿ, ಒಂದು ಕಡೆ ಭಾರತ ಜಾಗತಿಕ ಸಾಂಕ್ರಾಮಿಕ ರೋಗದ ವಿರುದ್ಧ ಪ್ರಬಲ ಹೋರಾಟ ನಡೆಸುತ್ತಿದೆ. ಜನರ ಆರೋಗ್ಯದ ಮೇಲೆ ಹೆಚ್ಚಿನ ಗಮನ ಹರಿಸುವುದರೊಂದಿಗೆ, ನಾವು ಆರ್ಥಿಕತೆಯ ಆರೋಗ್ಯದ ಮೇಲೆ ಸಮಾನವಾಗಿ ಕೇಂದ್ರೀಕರಿಸಿದ್ದೇವೆ ಎಂದರು. 

ಭಾರತವು ವಿಶ್ವದ ಅತ್ಯಂತ ಮುಕ್ತ ಆರ್ಥಿಕತೆ ಹೊಂದಿರುವ ದೇಶಗಳಲ್ಲಿ ಒಂದಾಗಿದೆ. ಎಲ್ಲಾ ಜಾಗತಿಕ ಕಂಪನಿಗಳು ಬಂದು ಭಾರತದಲ್ಲಿ ತಮ್ಮ ಅಸ್ತಿತ್ವವನ್ನು ಸ್ಥಾಪಿಸಲು ನಾವು ರೆಡ್ ಕಾರ್ಪೆಟ್ ಹಾಕುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಅನೇಕ ಸಾಧ್ಯತೆಗಳು ಮತ್ತು ಅವಕಾಶಗಳಿವೆ. ಕೃಷಿಯಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು ಬಹಳ ಆಕರ್ಷಕವಾದ ಹೂಡಿಕೆಗೆ ಅವಕಾಶವನ್ನು ಒದಗಿಸುತ್ತದೆ" ಎಂದು ಅವರು ಒತ್ತಿ ಹೇಳಿದರು.

ಅಸಾಧ್ಯವಾದುದನ್ನು ಸಾಧಿಸುವ ಮನೋಭಾವ ಭಾರತೀಯರಿಗಿದ್ದು, ಈಗಾಗಲೇ ಆರ್ಥಿಕ ಚೇತರಿಕೆ ಚಿಗುರೊಡೆಯುತ್ತಿದೆ. ಈ ಸಂದರ್ಭದಲ್ಲಿ ತಂತ್ರಜ್ಞಾನಕ್ಕೆ ಧನ್ಯವಾದಗಳು, ಪ್ರತಿ ಪೈಸೆಯೂ ನೇರವಾಗಿ ಫಲಾನುಭವಿಗಳನ್ನು ತಲುಪಿದೆ.

ಉಚಿತ ಅಡುಗೆ ಅನಿಲ, ಬ್ಯಾಂಕ್ ಖಾತೆಗಳಲ್ಲಿ ನಗದು, ಲಕ್ಷಾಂತರ ಜನರಿಗೆ ಉಚಿತ ಆಹಾರ ಧಾನ್ಯಗಳು ಮತ್ತು ಇತರ ಅನೇಕ ವಸ್ತುಗಳನ್ನು ಪರಿಹಾರ ರೂಪದಲ್ಲಿ ಒದಗಿಸಲಾಗಿದೆ ಎಂದರು. 

''ಕಳೆದ ಆರು ವರ್ಷಗಳಲ್ಲಿ, ಭಾರತವು ಒಟ್ಟು ಆರ್ಥಿಕ ಸೇರ್ಪಡೆ, ಇನ್ಫ್ರಾ ಕನ್ಸ್ಟ್ರಕ್ಷನ್, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್, ಜಿಎಸ್ ಟಿ ಸೇರಿದಂತೆ ದಿಟ್ಟ ತೆರಿಗೆ ಸುಧಾರಣೆಗಳಂತಹ ಕ್ಷೇತ್ರಗಳಲ್ಲಿ ಹೆಚ್ಚಿನ ಲಾಭ ಗಳಿಸಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಹೃದಯ ಛಿದ್ರವಾಗಿದೆ: ಆಫ್ರಿಕಾ ವಿರುದ್ಧದ ಸರಣಿ ಹೀನಾಯ ಸೋಲಿನ ನಂತರ ಇಡೀ ದೇಶದ ಕ್ಷಮೆಯಾಚಿಸಿದ ರಿಷಭ್ ಪಂತ್!

WPL Auction 2026: ಬರೋಬ್ಬರಿ 3.2 ಕೋಟಿ ರೂ. ಗೆ ಆಲ್ ರೌಂಡರ್ ದೀಪ್ತಿ ಶರ್ಮಾ ಸೋಲ್ಡೌಟ್‌! ಸ್ಟನ್ ಆದ ಗಂಗೂಲಿ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

SCROLL FOR NEXT