ಫೇಸ್'ಬುಕ್ ಸೇರಿ 89 ಆ್ಯಪ್ ಡಿಲೀಟ್ ಮಾಡುವಂತೆ ಯೋಧರಿಗೆ ಭಾರತೀಯ ಸೇನೆ ಸೂಚನೆ
ಕೇಂದ್ರ ಸರ್ಕಾರ ಚೀನಾದ 59 ಆ್ಯಪ್'ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳಿಗೆ ಫೇಸ್'ಬುಕ್, ಇನ್'ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜು.15ರೊಳಗೆ ಡಿಲೀಟ್ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿ: ಕೇಂದ್ರ ಸರ್ಕಾರ ಚೀನಾದ 59 ಆ್ಯಪ್'ಗಳನ್ನು ನಿಷೇಧಿಸಿದ ಬೆನ್ನಲ್ಲೇ, ಸೇನೆಯ ಯೋಧರು ಮತ್ತು ಅಧಿಕಾರಿಗಳಿಗೆ ಫೇಸ್'ಬುಕ್, ಇನ್'ಸ್ಟಾಗ್ರಾಮ್ ಸೇರಿ 89 ಆ್ಯಪ್ ಗಳನ್ನು ಜು.15ರೊಳಗೆ ಡಿಲೀಟ್ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮಗವನ್ನು ಜಾರಿಗೊಳಿಸಲಾಗಿದೆ. ಆದೇಶ ಪಾಲಿಸದಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನ ಮತ್ತು ಚೀನಾ ಗುಪ್ತಚರ ಸಂಸ್ಥೆಗಳು ಆನ್'ಲೈನ್ ನಲ್ಲಿ ಸೇನೆಯ ಮಾಹಿತಿ ಕದಿಯಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.