ದೇಶ

ವಲಸಿಗ ಕಾರ್ಮಿಕರ ವಿಷಯದಲ್ಲಿ ಎಲ್ಲವೂ ಸರಿ ಇದೆ ಎಂದ 'ಮಹಾ' ಸರ್ಕಾರಕ್ಕೆ ಸುಪ್ರೀಂ ತರಾಟೆ

Srinivas Rao BV

ನವದೆಹಲಿ: ವಲಸಿಗ ಕಾರ್ಮಿಕರ ವಿಷಯದಲ್ಲಿ ರಾಜ್ಯದಲ್ಲಿ ಎಲ್ಲವೂ ಸರಿ ಇದೆ ಎಂದು ಪ್ರಮಾಣಪತ್ರ ಸಲ್ಲಿಸಿದ್ದ ಮಹಾರಾಷ್ಟ್ರದ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 

ದೇಶದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ ವಲಸಿಗ ಕಾರ್ಮಿಕರ ಪರಿಸ್ಥಿತಿಯ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ಹಾಗೂ ಕೆಲವು ಪಿಐಎಲ್ ನ ವಿಚಾರಣೆ ನಡೆಸುತ್ತಿದ್ದ ನ್ಯಾ.ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್, ಎಂಆರ್ ಶಾ ಅವರ ಪೀಠ, ಮಹಾರಾಷ್ಟ್ರ ಸರ್ಕಾರದ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದು ಸರಿಯಾದ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚನೆ ನೀಡಿದೆ.

"ರಾಜ್ಯದಲ್ಲಿ ವಲಸಿಗ ಕಾರ್ಮಿಕರಿಗೆ ಆಹಾರ ಒದಗಿಸಲಾಗುತ್ತಿದೆ. ವಲಸಿಗ ಕಾರ್ಮಿಕರಿಗೆ ಸಂಬಂಧಿಸಿದ ಕೊರತೆಯ ಬಗ್ಗೆ ನನಗೆ ಅರಿವಿಲ್ಲ. ಅವರ ಊರುಗಳಿಗೆ ಕಳಿಸಬೇಕಿರುವ ಪ್ರಕರಣಗಳಾವುವೂ ಬಾಕಿ ಇಲ್ಲ ಎಂಬ ಮಹಾರಾಷ್ಟ್ರ ಸರ್ಕಾರದ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೊರ್ಟ್ ಹೇಳಿದೆ. ಆಹಾರ ಸಿಗದ, ತಮ್ಮ ಊರುಗಳಿಗೆ ತೆರಳಲು ಬಯಸುತ್ತಿರುವ ಕಾರ್ಮಿಕರನ್ನು ಹುಡುಕಿ ಅಗತ್ಯ ಸೌಲಭ್ಯ ಕಲ್ಪಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

SCROLL FOR NEXT