ದೇಶಾದ್ಯಂತ 24 ಗಂಟೆಗಳಲ್ಲಿ 2,67,061 ಕೋವಿಡ್ ಪರೀಕ್ಷೆ, ಜುಲೈ 8ರವರೆಗೆ ಒಟ್ಟಾರೆ 1,07,40,832 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,67,061 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.9ರವರೆಗೂ 1,07,40,832 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ದೇಶದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ನಿನ್ನೆ ಕೂಡ 22,752 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು. ಇದರೊಂದಿಗೆ ಸೋಂಕಿತರ ಸಂಖ್ಯೆ 7,42,417ಕ್ಕೆ ತಲುಪಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.