ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ! 
ದೇಶ

ವಿಕಾಸ್ ದುಬೆ ಎನ್ ಕೌಂಟರ್ ಕುರಿತು ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ ಈ ವಿಡಿಯೋ!

ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.

ಲಖನೌ: ಉತ್ತರ ಪ್ರದೇಶದಲ್ಲಿ ನಡೆದ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣವನ್ನು ಹಲವು ರಾಜಕಾರಣಿಗಳು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಬಹಿರಂಗಗೊಂಡ ವಿಡಿಯೋ ಒಂದು ಸಾರ್ವಜನಿಕರಲ್ಲೂ ಹಲವು ಪ್ರಶ್ನೆಗಳು ಮೂಡುವಂತೆ ಮಾಡುತ್ತಿದೆ.

ಕಾನ್ಪುರದಲ್ಲಿ ಪೊಲೀಸ್ ಸಿಬ್ಬಂದಿಗಳ ಮಾರಣಹೋಮಕ್ಕೆ ಕಾರಣವಾಗಿದ್ದ ವಿಕಾಸ್ ದುಬೆಯನ್ನು ಬಂಧಿಸಿ ಪೊಲೀಸ್ ಕಾವಲಿನಲ್ಲಿ  ಕರೆದೊಯ್ಯುತ್ತಿದ್ದಾಗ ಜು.10 ರಂದು ಬೆಳಿಗ್ಗೆ ಎನ್ ಕೌಂಟರ್ ಮಾಡಲಾಗಿದೆ. 

ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರು ಪಲ್ಟಿಯಾಯಿತು. ಈ ವೇಳೆ ವಿಕಾಸ್ ದುಬೆ ಪೊಲೀಸರ ಬಳಿ ಇದ್ದ ಗನ್ ನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ. ಪೊಲೀಸರು ಆತನನ್ನು ಸುತ್ತುವರೆದು ಶರಣಾಗುವಂತೆ ಎಚ್ಚರಿಸಿದರಾದರೂ ಆತ ಪೊಲೀಸರ ಮೇಲೆ ಗುಂಡು ಹಾರಿಸಲು ಯತ್ನಿಸಿದ. ಈ ವೇಳೆ ದುಬೆಯನ್ನು ಎನ್ ಕೌಂಟರ್ ಮಾಡಬೇಕಾಗಿ ಬಂತು ಎಂದು ಪೊಲೀಸರು ಹೇಳಿದ್ದಾರೆ. ಆದರೆ ಎನ್ ಕೌಂಟರ್ ಗೂ ಅರ್ಧ ಗಂಟೆ ಮುನ್ನ ಚಿತ್ರೀಕರಿಸಿರುವ ವಿಡಿಯೋದಲ್ಲಿ, ವಿಕಾಸ್ ದುಬೆಯನ್ನು ಕರೆದೊಯ್ಯುತ್ತಿದ್ದ ಕಾರ್ ನ್ನು ಹಿಂಬಾಲಿಸುವುದಕ್ಕೆ  ಮಾಧ್ಯಮ ಸಿಬ್ಬಂದಿಗಳಿಗೆ ನಿರ್ಬಂಧ ವಿಧಿಸಿರುವುದು ಬೆಳಕಿಗೆ ಬಂದಿದೆ.

ಇದನ್ನೇ ಪ್ರತಿಪಕ್ಷಗಳ ನಾಯಕರೂ ಸಹ ಪ್ರಶ್ನಿಸುತ್ತಿದ್ದು, ಎನ್ ಕೌಂಟರ್ ಗೆ ಸಂಬಂಧಿಸಿದಂತೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!