ದೇಶ

ಸೊಪೋರ್ ನಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರ ಹತ, ಕಾರ್ಯಾಚರಣೆ ಮುಂದುವರಿಕೆ 

Nagaraja AB

ಬಾರಾಮುಲ್ಲಾ: ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದ ಸೊಪೋರ್‌ನಲ್ಲಿ ಭದ್ರತಾ ಪಡೆಗಳು ಭಾನುವಾರ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಆಧರಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ), ಸಿಆರ್‌ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಭಾನುವಾರ ಬೆಳಗಿನ ಜಾವ ಸೋಪೋರ್‍ ಪಟ್ಟಣದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ರೆಬ್ಬಾನ್‌ನಲ್ಲಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ  ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋಚ್ಛೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ.ಇತ್ತೀಚಿನ ವರದಿಗಳು ಬಂದಾಗ ಕಾರ್ಯಾಚರಣೆ ಇನ್ನೂ ನಡೆಯುತ್ತಿತ್ತು ಎಂದು ಅವರು ಹೇಳಿದ್ದಾರೆ.

SCROLL FOR NEXT