ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ದೆಹಲಿ: 24 ಗಂಟೆಗಳಲ್ಲಿ 1246 ಹೊಸ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 1,13,740 ಕ್ಕೆ ಏರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಇಂದು ಕೊಂಚ ತಗ್ಗಿದ್ದು, ಇಂದು ಒಂದೇ ದಿನ 1246 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

ಕೊರೋನಾ ವೈರಸ್
Srinivasa Murthy VN
Updated On : 13 Jul 2020, 9:36 pm

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಇಂದು ಕೊಂಚ ತಗ್ಗಿದ್ದು, ಇಂದು ಒಂದೇ ದಿನ 1246 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

ಹೌದು.. ಕಳೆದ 24 ಗಂಟೆಗಳಲ್ಲಿ 1246 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,13,740ಕ್ಕೆ ಏರಿಕೆಯಾಗಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಆರೋಗ್ಯ ಇಲಾಖೆ,  ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 40 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 3,258ಕ್ಕೆ ಏರಿಕೆಯಾಗಿದೆ. ಈ ನಡುವೆ ಇಂದು ಒಂದೇ ದಿನ 1344 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.  ಒಟ್ಟಾರೆ 91312 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,017 ಕ್ಕೆ ಕುಸಿದಿದೆ.

Advertisement

Advertisement

ಅಂತೆಯೇ ದೆಹಲಿಯಲ್ಲಿ ನಿನ್ನೆ 12,171 ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, 3860 RT-PCR ಟೆಸ್ಟ್ ಮಾಡಲಾಗಿದೆ. 8311 ರ್ಯಾಪಿಡ್ ಆ್ಯಂಟಿ ಜೆನ್ ಟೆಸ್ಟ್ ಮಾಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement