ಸಾಂದರ್ಭಿಕ ಚಿತ್ರ 
ದೇಶ

ಅನಂತ್‌ನಾಗ್ ನಲ್ಲಿ ಗುಂಡಿನ ಚಕಮಕಿ: ಜೆಇಎಂನ ಇಬ್ಬರು ಉಗ್ರರು ಹತ

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಅನಂತ್‌ನಾಗ್: ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಗುಂಡಿನ ಚಕಮಕಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯನ್ನಾಧರಿಸಿ ರಾಷ್ಟ್ರೀಯ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ(ಎಸ್‌ಒಜಿ) ಜಂಟಿಯಾಗಿ ಸೋಮವಾರ ಮುಂಜಾನೆ ಅನಂತ್‌ನಾಗ್‌ನ ಸರಿಗುಫ್ವಾರದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಯುಎನ್‌ಐಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

SCROLL FOR NEXT