ದೇಶ

ಕೋವಿಡ್ ನಿರ್ವಹಣೆ: ಅಮಿತ್ ಶಾ ವಿರುದ್ಧ ರಾಹುಲ್ ವಾಗ್ದಾಳಿ

Lingaraj Badiger

ನವದೆಹಲಿ: ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಎನ್‌ಡಿಎ ಸರ್ಕರ ಸಂಪೂರ್ಣ ವಿಫಲವಾಗಿದೆ ಎಂದು ತಮ್ಮ ವಾಗ್ದಾಳಿಯನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು, ಕೊರೋನಾ ಸಾಂಕ್ರಾಮಿಕದ ವಿರುದ್ಧ ಹೋರಾಟದಲ್ಲಿ ಭಾರತ ನಿಜಕ್ಕೂ ಉತ್ತಮ ಸ್ಥಿತಿಯಲ್ಲಿದೆಯೇ? ಎಂದು ಸೋಮವಾರ ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಕಳೆದ ಏಳು ದಿನಗಳಲ್ಲಿ ಅಮೆರಿಕ, ಭಾರತದ, ದಕ್ಷಿಣ ಕೊರಿಯಾ ಮತ್ತು ನ್ಯೂಜಿಲೆಂಡ್‌ನ ಸರಾಸರಿ ಕೋವಿಡ್ ಪ್ರಕರಣಗಳ ಲೆಕ್ಕದ ರೇಖಾ ನಕ್ಷೆಯನ್ನು ಲಗತ್ತಿಸಿರುವ ರಾಹುಲ್‌, "ಭಾರತ ಕೋವಿಡ್ ಹೋರಾಟದಲ್ಲಿ "ಉತ್ತಮ ಸ್ಥಿತಿ"ಯಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್‌) ಆಯೋಜಿಸಿದ್ದ ಮೆಗಾ ಸಸಿ ನೆಡುವ ಅಭಿಯಾನದಲ್ಲಿ ಪಾಲ್ಗೊಂಡ ನಂತರ ವೆಬಿನಾರ್‌ ಮೂಲಕ ಮಾತನಾಡಿದ ಅವರು, ಅಮಿತ್ ಶಾ ಅವರು ಕೋವಿಡ್ ವಿರುದ್ಧದ ಹೋರಾಟಕ್ಕೆ ವಿಶ್ವವೇ ಭಾರತವನ್ನು ಹೊಗಳುತ್ತಿದೆ ಎಂದಿದ್ದರು ಎಂದು ಟೀಕಿಸಿದರು.

ಕೊರೋನಾ ವಿರುದ್ಧದ ಹೋರಾಟದಲ್ಲಿ ನಾವು ಉತ್ತಮ ಸ್ಥಾನದಲ್ಲಿದ್ವೇವೆ ಮತ್ತು ನಮ್ಮ ಈ ಹೋರಾಟ ಮುಂದುವರೆಯಲಿದೆ. ಯಾರೂ ಭಯಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದರು.

SCROLL FOR NEXT