ಪ್ಲಾಸ್ಮಾ ತೆಗೆದುಕೊಂಡು ಹೋಗುತ್ತಿದ್ದಾಗ ಅಪಘಾತ, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನವಜಾತ ಶಿಶು ಸಾವು!
ಒಂದು ಭೀಕರ ಘಟನೆಯಲ್ಲಿ, ತಮ್ಮ ನವಜಾತ ಶಿಶುವಿಗೆ ಪ್ಲಾಸ್ಮಾ ಸಾಗಿಸುತ್ತಿದ್ದ ಕುಟುಂಬದ ಮೂವರು ಅಪಘಾತದಲ್ಲಿ ಗಾಯಗೊಂಡ ಪರಿಣಾಮ ಸಮಯಕ್ಕೆ ಸರಿಯಾಗಿ ಪ್ಲಾಸ್ಮಾ ದೊರಕದೆ ಮಗು ದುರಂತ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ನವದೆಹಲಿ: ಒಂದು ಭೀಕರ ಘಟನೆಯಲ್ಲಿ, ತಮ್ಮ ನವಜಾತ ಶಿಶುವಿಗೆ ಪ್ಲಾಸ್ಮಾ ಸಾಗಿಸುತ್ತಿದ್ದ ಕುಟುಂಬದ ಮೂವರು ಅಪಘಾತದಲ್ಲಿ ಗಾಯಗೊಂಡ ಪರಿಣಾಮ ಸಮಯಕ್ಕೆ ಸರಿಯಾಗಿ ಪ್ಲಾಸ್ಮಾ ದೊರಕದೆ ಮಗು ದುರಂತ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಪೋಷಕರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಚಲಿಸುತ್ತಿದ್ದ ಇನ್ನೊಂದು ಕಾರಿಗೆ ಢಿಕ್ಕಿಯಾಗಿ ಅಪಘಾತವಾಗಿದೆ. ಆದರೆ ಇತ್ತ ಪ್ಲಾಸ್ಮಾ ಲಭ್ಯವಿಲ್ಲದ ಕಾರಣ ನವಜಾತ ಶಿಶು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಜುಲೈ 11ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕು ಕಂಡಿದೆ,ಇದೇ ವೇಳೆ ವೇಗವಾಗಿ ಕಾರು ಚಲಾಯಿಸುತ್ತಿದ್ದ ಕಾರ್ ಚಾಲಕನನ್ನು ಬಂಧಿಸಿರುವುದಾಗಿ ದೆಹಲಿ ಪೋಲೀಸರು ಹೇಳಿಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.