ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಾಳೆ ಸಿಬಿಎಸ್‍ ಇ 10ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು.

ನಾಳೆ ಸಿಬಿಎಸ್‍ ಇ 10ನೇ ತರಗತಿ ಫಲಿತಾಂಶ ಪ್ರಕಟ
Srinivas Rao BV
Updated On : 14 Jul 2020, 3:36 pm

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು. ‘ನನ್ನ ಪ್ರೀತಿಯ ಮಕ್ಕಳು, ಪೋಷಕರು ಮತ್ತು ಶಿಕ್ಷಕರೇ, ಸಿಬಿಎಸ್‌ಇ ಮಂಡಳಿಯ 10ನೇ ತರಗತಿ ಪರೀಕ್ಷಾ ಫಲಿತಾಂಶಗಳನ್ನು ನಾಳೆ ಪ್ರಕಟಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳ ಯಶಸ್ಸನ್ನು ನಾನು ಬಯಸುತ್ತೇನೆ.’ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಟ್ವೀಟ್‍ ಮಾಡಿದ್ದಾರೆ. 

ಇಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಗಳವಾರ ಬೆಳಿಗ್ಗೆಯಿಂದಲೇ ಕೆಲ ಚಾನೆಲ್‌ಗಳಲ್ಲಿ ಸುದ್ದಿ ಹರಿದಾಡಲು ಆರಂಭಿಸುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಆತಂಕವನ್ನುಂಟುಮಾಡಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸ್ಪಷ್ಟನೆ ನೀಡಿದ್ದಾರೆ. 

ಮಂಡಳಿಯ 10ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟಿಸುವುದಿಲ್ಲ ಎಂದು ಸಿಬಿಎಸ್‌ಇ ಪ್ರಧಾನ ಕಚೇರಿಯು ಮೊದಲ ಟ್ವೀಟ್‌ನಲ್ಲಿ ಹೇಳಿತ್ತು. ಇದರ ನಂತರ, ಡಾ. ಪೋಖ್ರಿಯಾಲ್ ಅವರು ಟ್ವೀಟ್ ಮಾಡಿ ನಾಳೆ ಫಲಿತಾಂಶಗಳು ಹೊರಬೀಳಲಿವೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಮಂಡಳಿಯು ನಿನ್ನೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿತ್ತು. ನಂತರ ಮಂಡಳಿಯ 10ನೇ ತರಗತಿಫಲಿತಾಂಶಗಳ ಬಗ್ಗೆ ಹೆಚ್ಚಿನ ಕುತೂಹಲವಿತ್ತು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments