ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 3,20,161 ಕೋವಿಡ್ ಪರೀಕ್ಷೆ, ಜುಲೈ 14ರ ವರಗೆ ಒಟ್ಟಾರೆ 1,24,12,664 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

Manjula VN

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,20,161 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.14ರೆಗೂ 1,24,12,664 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 29,429 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9,36,6181ಕ್ಕೆ ಏರಿಕೆಯಾಗಿದೆ. 

ಈ ನಡುವೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,67,665 ತಲುಪಿದ್ದು, 10,695 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 1,47,324 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 2,099 ಮಂದಿ ಬಲಿಯಾಗಿದ್ದಾರೆ. 

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 1,15,346 ತಲುಪಿದ್ದು, 3,446 ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

SCROLL FOR NEXT