ರಾಹುಲ್ ಗಾಂಧಿ(ಸಂಗ್ರಹ ಚಿತ್ರ) 
ದೇಶ

ಕಾಂಗ್ರೆಸ್ ತೊರೆಯಲಿಚ್ಛಿಸುವವರು ತೊರೆಯಲಿ, ಯುವಕರಿಗೆ ಅವಕಾಶ ಸಿಗುತ್ತದೆ: ರಾಹುಲ್ ಗಾಂಧಿ

ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದು, ಪಕ್ಷ ತೊರೆಯಬೇಕೆಂದು ಬಯಸಿದವರು ತೊರೆಯಲಿ, ಅದರಿಂದ ಯುವಕರಿಗೆ ಅವಕಾಶದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ.

ನವದೆಹಲಿ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದು, ಪಕ್ಷ ತೊರೆಯಬೇಕೆಂದು ಬಯಸಿದವರು ತೊರೆಯಲಿ, ಅದರಿಂದ ಯುವಕರಿಗೆ ಅವಕಾಶದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ.

ಈ ಕುರಿತಂತೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ಕಾಂಗ್ರೆಸ್‌ನ ಯುವ ಘಟಕ ಎನ್‌ಎಸ್‌ಯುಐನ ಸಭೆಯಲ್ಲಿ ಮಾತನಾಡಿರುವ ರಾಹುಲ್ ಗಾಂಧಿ ಅವರು, 'ಸಚಿನ್‌ ಪೈಲಟ್‌ ಹೆಸರನ್ನು ಪ್ರಸ್ತಾಪಿಸದೇ ಪಕ್ಷ ತೊರೆಯ ಬಯಸಿದವರು ತೊರೆಯಬಹುದು, ಅದರಿಂದ ಯುವ ನಾಯಕರಿಗೆ ಪಕ್ಷದ ಬಾಗಿಲು ತೆರೆಯುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಕಳೆದ ನಾಲ್ಕು ದಿನಗಳಿಂದ ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ನಡುವೆ ಭಿನ್ನಮತ ಸೃಷ್ಟಿಯಾಗಿ ಪೈಲಟ್‌ ಬಂಡಾಯದ ಬಾವುಟ ಹಾರಿಸಿದ್ದಾರೆ. ಇದರಿಂದ ಸಚಿನ್‌ ಪೈಲಟ್‌ ಅವರನ್ನು ಡಿಸಿಎಂ ಹಾಗೂ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು.  ಮೂರು ತಿಂಗಳ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ರೀತಿಯಲ್ಲಿಯೇ ಸಚಿನ್‌ ಪೈಲಟ್‌ ಕೂಡ ಭಾರತೀಯ ಜನತಾ ಪಕ್ಷ ಸೇರುತ್ತಾರೆಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಬುಧವಾರ ಬೆಳಗ್ಗೆ ನಾನು ಬಿಜೆಪಿ ಸೇರುವುದಿಲ್ಲ, ನಾನಿನ್ನು ಕಾಂಗ್ರೆಸ್‌ನಲ್ಲಿದ್ದೇನೆ ಎಂದು ಹೇಳಿದ್ದ ಸಚಿನ್‌ ಪೈಲಟ್‌ ಕುತೂಹಲ ಸೃಷ್ಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್