ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಒಂದೇ ದಿನ 8,641 ಹೊಸ ಪ್ರಕರಣ ಪತ್ತೆ, 266 ಬಲಿ; 2,84,281ಕ್ಕೇರಿದ ಸೋಂಕಿತರ ಸಂಖ್ಯೆ    

ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,641 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,84,281ಕ್ಕೇರಿದೆ.

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 8,641 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,84,281ಕ್ಕೇರಿದೆ.

ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ 8,641 ಕೊರೋನಾ ವೈರಸ್ ಕೇಸ್​ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,84,281ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 266 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 11,194ಕ್ಕೆ ಏರಿಕೆಯಾಗಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,58,140ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,14,648 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಶೇ.55.63ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.3.94ರಷ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!