ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಮುಂಬೈ ಮಹಾನಗರಿಯಲ್ಲಿ ಇಂದು 1498 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 97,751ಕ್ಕೆ ಏರಿಕೆಯಾಗಿದೆ.
ಬೃಹನ್ ಮುಂಬೈ ಮಹಾನಗರ ಪಾಲಿಕೆ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಒಂದೇ ದಿನ ಮುಂಬೈನಲ್ಲಿ 1498 ಹೊಸ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 97,751ಕ್ಕೆ ಏರಿಕೆಯಾಗಿದೆ. ಒಟ್ಟಾರೆ 68,537 ಸೋಂಕಿತರು ಗುಣಮುಖರಾಗಿದ್ದು, 23,694 ಸಕ್ರಿಯ ಪ್ರಕರಣಗಳಿವೆ.
ಇನ್ನು ಇಂದು 56 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮುಂಬೈನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 5,520ಕ್ಕೆ ಏರಿಕೆಯಾಗಿದೆ ಎಂದು ಬಿಎಂಸಿ ಮಾಹಿತಿ ನೀಡಿದೆ.