ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 32 ಸಾವಿರ ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 9.70 ಲಕ್ಷಕ್ಕೆ ಏರಿಕೆ

Manjula VN

ನವದೆಹಲಿ: ದೇಶದಲ್ಲಿ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 32,695 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 970,169ಕ್ಕೆ ತಲುಪಿದೆ. 

ಇದೇ ವೇಳೆ 606 ಮಂದಿ ಮಹಾಮಾರಿ ವೈರಸ್'ಗೆ ಒಂದೇ ದಿನ ಬಲಿಯಾಗಿದ್ದು, ಈ ವರೆಗೆ ವೈರಸ್'ಗೆ ಬಲಿಯಾದವರ ಸಂಖ್ಯೆ 24,915ಕ್ಕೆ ತಲುಪಿದೆ. 

ಇದೇ ವೇಳೆ 21415 ಮಂದಿ ಸೋಂಕಿನಿಂದ ಗುಣಮುಖರಾಗಿದ್ಗು, 970,169 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 6,12,815ಕ್ಕೆ ತಲುಪಿದೆ.  ಪ್ರಸ್ತುತ ದೇಶದಲ್ಲಿನ್ನೂ 3,31,146 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನು ದೇಶದಲ್ಲಿ ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 7975 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಜೊತೆಗೆ ರಾಜ್ಯದಲ್ಲಿ 233 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ತಮಿಳುನಾಡಿನಲ್ಲಿ 4496 ಹೊಸ ಕೇಸು ಪತ್ತೆಯಾಗಿದ್ದು, 68 ಜನರು ಸಾವನ್ನಪ್ಪಿದ್ದಾರೆ. 

ಕರ್ನಾಟಕ ರಾಜ್ಯದಲ್ಲಿ 3176 ಕೇಸು ಪತ್ತೆಯಾಗಿದ್ದು, 87 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯಲ್ಲಿ 1674 ಕೇಸು ದಾಖಲಾಗಿದ್ದು, 41 ಜನರು ಸಾವನ್ನಪ್ಪಿದ್ದಾರೆ. 

ದೇಶಾದ್ಯಂತ 24 ಗಂಟೆಗಳಲ್ಲಿ 3,26,826 ಕೋವಿಡ್ ಪರೀಕ್ಷೆ
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,26,826 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,26,826 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.14ರೆಗೂ 1,27,39,490  ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

SCROLL FOR NEXT