ದೇಶ

ಕವಿ, ಹೋರಾಟಗಾರ ವರವರ ರಾವ್ ಗೆ ಕೋವಿಡ್-19 ಪಾಸಿಟಿವ್

Nagaraja AB

ಮುಂಬೈ:ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ತೆಲುಗು ಕವಿ, ಸಾಹಿತಿ ಮತ್ತು ಹೋರಾಟಗಾರ 80 ವರ್ಷದ ವರವರ ರಾವ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಅನಾರೋಗ್ಯದ ಸಮಸ್ಯೆಯಿಂದಾಗಿ ತಾಲೋಜಾ ಸೆಂಟ್ರಲ್ ಜೈಲಿನಿಂದ ಜೆಜೆ ಆಸ್ಪತ್ರೆಗೆ ವರವರ ರಾವ್ ಅವರನ್ನು ಸ್ಥಳಾಂತರಿಸಲಾಗಿತ್ತು. ಅಲ್ಲಿನ ವೈದ್ಯರು ಕೊರೋನಾ ಸೋಂಕಿನ ಪರೀಕ್ಷೆ ಮಾಡಿದ್ದು, ಪಾಸಿಟಿವ್ ವರದಿ ಬಂದಿದೆ.

ಈವರೆಗೂ ವರವರ ರಾವ್ ಅವರಿಗೆ ಸೋಂಕಿನ ಲಕ್ಷಣ ಕಂಡುಬಂದಿಲ್ಲ,ಉಸಿರಾಟದ ಸಮಸ್ಯೆಯೂ ಕಂಡುಬಂದಿಲ್ಲ. ಆರೋಗ್ಯವಾಗಿದ್ದಾರೆ.ಶೀಘ್ರದಲ್ಲಿಯೇ ಅವರನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಜೆಜೆ ಆಸ್ಪತ್ರೆ ಡೀನ್ ಡಾ. ರಂಜಿತ್ ಮಾಂಕೇಶ್ವರ್ ತಿಳಿಸಿದ್ದಾರೆ.ಸೆಂಟ್ ಜಾರ್ಜ್ ಆಸ್ಪತ್ರೆಗೆ ರಾವ್ ಅವರನ್ನು ಸ್ಥಳಾಂತರಿಸುವ ಸಾಧ್ಯತೆಯಿದೆ.

ವರವರ ರಾವ್ ಅವರ ಆರೋಗ್ಯ ಕ್ಷೀಣಿಸಿದ್ದು, ಕೂಡಲೇ ಅವರಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕೆಂದು ಅವರ ಕುಟುಂಬಸ್ಥರು ಕಳೆದ ವಾರ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದ್ದರು.

ಕಳೆದ ತಿಂಗಳು ವರವರ ರಾವ್ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯವೊಂದು ತಿರಸ್ಕರಿಸಿತ್ತು. ವಿಶೇಷ ನ್ಯಾಯಾಲಯದ ತೀರ್ಪು ವಿರೋಧಿಸಿ ಬಾಂಬೆ ಹೈಕೋರ್ಟಿಗೆ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಾಳೆ ನಡೆಯುವ ಸಾಧ್ಯತೆಯಿದೆ.

SCROLL FOR NEXT