ಕೊರೋನಾ ವೈರಸ್ 
ದೇಶ

ಕೊರೋನಾ ವೈರಸ್: ದೇಶದಲ್ಲಿ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಚೇತರಿಕೆ ಪ್ರಮಾಣ ಶೇ.63.33ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಈವರೆಗೆ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ 10 ಲಕ್ಷ ದಾಟಿದೆ. ಅಂತೆಯೇ ಸೋಂಕಿನಿಂದ 6.35 ಲಕ್ಷಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿರುವುದು ಗಮನಾರ್ಹ ಅಂಶವಾಗಿದೆ. ದೇಶದಲ್ಲಿ ಪ್ರಸ್ತುತ 3.42 ಲಕ್ಷ ಕೋವಿಡ್‌ ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಶೇ 1.94ಕ್ಕಿಂತಲೂ ಕಡಿಮೆ ಪ್ರಕರಣಗಳಲ್ಲಿ ಐಸಿಯುಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪೈಕಿ ಶೇ 0.35ರಷ್ಟು ಜನರಿಗೆ ವೆಂಟಿಲೇಟರ್‌ ಅಗತ್ಯವಾಗಿದೆ ಹಾಗೂ ಶೇ 2.81ರಷ್ಟು ಪ್ರಕರಣಗಳಲ್ಲಿ ಆಕ್ಸಿಜನ್‌ ನೀಡಲಾಗುತ್ತಿದೆ. ಇದರೊಂದಿಗೆ ಗುಣಮುಖರಾಗುವ ಪ್ರಮಾಣ ಶೇ 63.33ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

135 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ 10 ಲಕ್ಷ  ಜನರ ಪೈಕಿ 727.4 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಯುರೋಪಿಯನ್‌ ರಾಷ್ಟ್ರಗಳಿಗೆ ಹೋಲಿಸಿದರೆ ಈ ಪ್ರಮಾಣ ನಾಲ್ಕರಿಂದ ಎಂಟು ಪಟ್ಟು ಕಡಿಮೆ ಇದೆ ಹಾಗೂ ಕೋವಿಡ್‌ನಿಂದ ಪ್ರತಿ 10 ಲಕ್ಷ ಜನರಲ್ಲಿ 18.6 ಮಂದಿ ಸಾವಿಗೀಡಾಗಿದ್ದಾರೆ. ಈ ಪ್ರಮಾಣ ಜಗತ್ತಿನಲ್ಲೇ ಅತಿ ಕಡಿಮೆ ಇದೆ. ದೇಶದಲ್ಲಿ 1,383 ಕೋವಿಡ್‌ ಆಸ್ಪತ್ರೆಗಳು, 3,107 ಕೋವಿಡ್‌ ಆರೋಗ್ಯ ಕೇಂದ್ರಗಳು ಹಾಗೂ 10,382 ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಒಟ್ಟು 46,673 ಐಸಿಯು ಬೆಡ್‌ಗಳ ವ್ಯವಸ್ಥೆ ಇದೆ. ದೇಶದಾದ್ಯಂತ ಆಸ್ಪತ್ರೆಗಳಲ್ಲಿ 21,848 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗಿದೆ  ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಅಲ್ಲದೆ ಕೇಂದ್ರ ಸರ್ಕಾರದಿಂದ 235.58 ಲಕ್ಷ ಎನ್95 ಮಾಸ್ಕ್‌ಗಳು ಹಾಗೂ 124.26 ಲಕ್ಷ ಪಿಪಿಇ ಕಿಟ್‌ಗಳನ್ನು ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ಕೇಂದ್ರೀಯ ಸಂಸ್ಥೆಗಳಿಗೆ ತಲುಪಿಸಲಾಗಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮನೆ ಮನೆಗೂ ತೆರಳಿ ಸಮೀಕ್ಷೆ ನಡೆಸುತ್ತಿರುವುದು, ಸಂಪರ್ಕ ಪತ್ತೆ ಕಾರ್ಯ, ಕಂಟೈನ್‌ಮೆಂಟ್‌ ಮತ್ತು ಬಫರ್‌ ವಲಯಗಳಲ್ಲಿ ನಿಗಾವಹಿಸಿರುವುದು, ಹೆಚ್ಚೆಚ್ಚು ಗಂಟಲು ದ್ರವ ಪರೀಕ್ಷೆ ನಡೆಸುವ ಮೂಲಕ ಬಹುಬೇಗ ಚಿಕಿತ್ಸೆಗೆ ಒಳಪಡಿಸುವ ಅವಕಾಶ ಸಿಗುತ್ತಿದೆ. ಸೋಂಕು ಪ್ರಾರಂಭಿಕ ಲಕ್ಷಣಗಳನ್ನು ಹೊಂದಿರದ ಶೇ.80ರಷ್ಟು ಹಾಗೂ ಅಲ್ಪ ಮಟ್ಟದ ಸೋಂಕು ಲಕ್ಷಣಗಳು ಕಂಡು ಬಂದಿರುವವರಿಗೆ ವೈದ್ಯಕೀಯ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸಲಹೆ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಶುಕ್ರವಾರ ದೇಶದಲ್ಲಿ ಕೋವಿಡ್‌–19 ದೃಢಪಟ್ಟ 34,956 ಹೊಸ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT