ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಭಾರತ್ ಸೇನಾದ ಸದಸ್ಯ ಬಂಧನ 
ದೇಶ

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಭಾರತ್ ಸೇನಾ ಸದಸ್ಯನ ಬಂಧನ 

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿದ ಪ್ರಕಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಕೊಯಂಬತ್ತೂರಿನ ಪೊಡನೂರ್ ಪೊಲೀಸರು ಬಂಧಿಸಿದ್ದಾರೆ.

ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿದ ಪ್ರಕಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಕೊಯಂಬತ್ತೂರಿನ ಪೊಡನೂರ್ ಪೊಲೀಸರು ಬಂಧಿಸಿದ್ದಾರೆ.

ಭಾರತ ಸೇನಾದ ಸದಸ್ಯ, ಚೆಟ್ಟಿಪಲಯಂ ರಸ್ತೆಯ 21 ವರ್ಷದ ಎಂ ಅರುಣ್ ಕೃಷ್ಣನ್ ಬಂಧಿತ ವ್ಯಕ್ತಿ. "ಅರುಣ್ ಕೃಷ್ಣನ್ ಭಾರತ್ ಸೇನಾದ ಕೊಯಂಬತ್ತೂರಿನ ದಕ್ಷಿಣ ಜಿಲ್ಲಾ ಸಂಘಟಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಡೆಪ್ಯುಟಿ ಕಮಿಷನರ್ ಜಿ ಸ್ಟಾಲಿನ್ ಹೇಳಿದ್ದಾರೆ.

ಸಮಾಜದಲ್ಲಿ ಗಲಭೆ ಉಂಟುಮಾಡುವ ಉದ್ದೇಶ 153 ಸೆಕ್ಷನ್ 153  A, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪದಡಿ ಸೆಕ್ಷನ್ 504 ರ ಅಡಿಯಲ್ಲಿ ಅರುಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಸುಂದರ್ ಪುರಂ ನ ಅಯ್ಯರ್ ಆಸ್ಪತ್ರೆ ಬಸ್ ನಿಲ್ದಾಣದ ಬಳಿ ಇರುವ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇದರಿಂದಾಗಿ ಪೆರಿಯಾರ್ ಗೆ ಅವಮಾನವಾಗಿದೆ ಎಂದು ದ್ರಾವಿಡಾರ್ ಕಳಗಂ ಹಾಗೂ ತಂಥಿ ಪೆರಿಯಾರ್ ದ್ರಾವಿಡಾರ್ ಕಳಗಂ ಸಂಘಟನೆಯ ಸದಸ್ಯರು ಆರೋಪಿಸಿ ಈ ಕೃತ್ಯಕ್ಕೆ ಕಾರಣವಾದ ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT