ದೇಶ

ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ ತಪ್ಪನ್ನು ಒಪ್ಪಿಕೊಂಡಂತೆ: ರಾಜಸ್ಥಾನದ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್

Srinivas Rao BV

ನವದೆಹಲಿ: ರಾಜಸ್ಥಾನದಲ್ಲಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರವನ್ನು ಬಹಿರಂಗಪಡಿಸಿರುವ ಆಡಿಯೋ ಟೇಪ್ ಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. 

ಆಡಿಯೋ ಟೇಪ್ ಗಳ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆನ್ನುತ್ತಿರುವ ಬಿಜೆಪಿ ಬೇಡಿಕೆ ತಪ್ಪನ್ನು ಒಪ್ಪಿಕೊಂಡಂತೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಹೇಳಿದ್ದಾರೆ. 

ಈ ಬೆಳವಣಿಗೆ ಮೂಲಕ ರಾಜಸ್ಥಾನದ ಸರ್ಕಾರವನ್ನು ಅಸ್ಥಿರಗೊಳಿಸಲು ಸಚಿನ್ ಪೈಲಟ್ ಬಂಡಾಯದ ಹಿಂದೆ ಬಿಜೆಪಿ ಇದೆ ಎನ್ನುವುದು ಖಾತ್ರಿಯಾಗಿದೆ ಎಂದು ಪವನ್ ಖೇರಾ ತಿಳಿಸಿದ್ದಾರೆ. ಸಚಿನ್ ಪೈಲಟ್ ಹಾಗೂ ಇತರ ಬಂಡಾಯ ಶಾಸಕರು ಬಿಜೆಪಿ ಆಡಳಿತವಿರುವ ಹರ್ಯಾಣದ ಹೊಟೆಲ್ ನಲ್ಲಿ ಆಶ್ರಯ ಪಡೆದಿರುವುದೂ ಸಹ ರಾಜಸ್ಥಾನ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಬಿಜೆಪಿ ಪಾತ್ರವಿದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕಳೆದ ವಾರ ಬಿಜೆಪಿ ನಡೆಸಿದ ಪ್ರಜಾಪ್ರಭುತ್ವದ ಕಗ್ಗೊಲೆಯ ಯತ್ನಕ್ಕೆ ನಾವು ಸಾಕ್ಷಿಯಾಗಿದ್ದೇವೆ, ಬಿಜೆಪಿಯ ಷಡ್ಯಂತ್ರದ ಹೊಸ ಪದರಗಳು ದಿನನಿತ್ಯವೂ ಅನಾವರಣಗೊಳಿಸಿದೆ.  ಬಿಜೆಪಿಯವರು ಪ್ರಜಾಪ್ರಭುತ್ವದ ಕೊಲೆ ಮಾಡುತ್ತಿರುವಾಗ ಅದನ್ನು ಯಾಕೆ ದಾಖಲು ಮಾಡುತ್ತಿದ್ದೀರಿ, ಅದು ಕಾನೂನು ಬದ್ಧವೇ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಪವನ್ ಖೇರಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

SCROLL FOR NEXT