ದೇಶ

ಕೋವಿಡ್-19 ಪ್ರಕರಣಗಳ ಹೆಚ್ಚಳ: ಪರಿಸ್ಥಿತಿ ಸುಧಾರಣೆಗಾಗಿ ಕಠಿಣ ಕ್ರಮ ಕೈಗೊಳ್ಳಲು 4 ರಾಜ್ಯಗಳಿಗೆ ಕೇಂದ್ರದ ಸೂಚನೆ

Srinivas Rao BV

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗಿ ನಿಯಂತ್ರಣಕ್ಕೆ ಬಾರದ 4 ರಾಜ್ಯಗಳಿಗೆ ಪರಿಸ್ಥಿತಿ ಸುಧಾರಣೆಗೆ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
    
ಬಿಹಾರ, ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ ರಾಜ್ಯಗಳಿಗೆ ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈ ರಾಜ್ಯಗಳ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಮುಖ್ಯಕಾರ್ಯದರ್ಶಿಗಳಿಗೆ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಲವ್ ಅಗರ್ವಾಲ್ ಪತ್ರ ಬರೆದಿದ್ದಾರೆ.

ಕಂಟೈನ್ಮೆಂಟ್ ಜೋನ್, ಬಫರ್ ಜೋನ್ ಗಳಲ್ಲಿ ಕಠಿಣ ನಿರ್ಬಂಧಗಳನ್ನು ಪಾಲಿಸಬೇಕು, ಶೀಘ್ರ ಗತಿಯಲ್ಲಿ ಕೊರೋನಾ ಪ್ರಕರಣಗಳನ್ನು ಪತ್ತೆ ಮಾಡಬೇಕು, ಪತ್ತೆಯಾದ  ಹೊಸ ಪ್ರಕರಣಗಳ ಪೈಕಿ ಶೇ.80 ರಷ್ಟು ಪ್ರಕರಣಗಳ ನಿಕಟ ಸಂಪರ್ಕಗಳನ್ನು ಪತ್ತೆ ಮಾಡಿ 72 ಗಂಟೆಗಳಲ್ಲಿ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ತಿಳಿಸಿದ್ದು ಪರೀಕ್ಷಾ ಪ್ರಮಾಣ ಶೇ.10 ಕ್ಕಿಂತಲೂ ಕಡಿಮೆ ಇರಬಾರದೆಂದು ಸೂಚನೆ ನೀಡಲಾಗಿದೆ.

SCROLL FOR NEXT