ಸಾಂದರ್ಭಿಕ ಚಿತ್ರ 
ದೇಶ

ಪ್ರೀತಿ ಒಲ್ಲೆ ಎಂದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಭಗ್ನಪ್ರೇಮಿ!

ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ.

ಕೊಯಂಬತ್ತೂರು: ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ 20 ವರ್ಷದ ಯುವಕನೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿಗೆ ಇರಿದು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಪೆರೂರು ಬಳಿ ನಡೆದಿದೆ.

ಕೊಯಂಬತ್ತೂರಿನ ಪೆರೂರು ಬಳಿಯ ಅರುಮುಗಗೌಡನೂರುನಲ್ಲಿ ಶುಕ್ರವಾರ ರಾತ್ರಿ 10-30ರ ವೇಳೆಯಲ್ಲಿ ಈ ಘಟನೆ ನಡೆದಿದೆ.
ಯುವತಿ ಚಿಕಿತ್ಸೆಗೆ ಸ್ಪಂದಿಸದೆ  ಕೊಯಂಬತ್ತೂರಿನ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿರುವುದಾಗಿ ಆಸ್ಪತ್ರೆಯ
ಅಧಿಕೃತ ಮೂಲಗಳು ಸ್ಪಷ್ಪಪಡಿಸಿವೆ. ಹೊಟ್ಟೆಗೆ ಹಲವು ಬಾರಿ ಇರಿತದಿಂದ ಗಾಯಗೊಂಡು ಯುವತಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಪೆರೂರಿನ ತವಾತಿರು ಶಾಂತಲಿಂಗ ಅಡಿಗಲರ್ ಕಲಾ, ವಿಜ್ಞಾನ ಮತ್ತು ತಮಿಳು ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿನಿ ಐಶ್ವರ್ಯ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಶಂಕಿತನನ್ನು ಸಿ. ರಾತೀಶ್ ಎನ್ನಲಾಗಿದೆ. ಮೋಟಾರ್ ವಿಂಡಿಂಗ್ ವಾರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಈತ ಅರುಮುಗಗೌಡನೂರುನ ಎಂಆರ್ ಗಾರ್ಡನ್ ನಿವಾಸಿಯಾಗಿದ್ದಾನೆ.ಆತನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೆಲ ತಿಂಗಳಿನಿಂದ ರಾತೀಶ್ ಪ್ರೀತಿಯಲ್ಲಿ ಬಿದ್ದಿರುವುದು ಯುವತಿಯ ಮನೆಯವರಿಗೆ ಗೊತ್ತಾಗಿ ಆತನೊಂದಿಗೆ ಸಂಬಂಧವನ್ನು 
ಕಡಿದುಕೊಳ್ಳುವಂತೆ ಸೂಚಿಸಿದ್ದಾರೆ. ಕೂಡಲೇ ಆಕೆ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ್ದಾಳೆ. ಇದೇ ಕಾರಣಕ್ಕೆ ಆಕೆಗೆ ಇರಿದು ಆರೋಪಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಐಶ್ವರ್ಯ ಮನೆಗೆ ಹೋದ ಶಂಕಿತ ಸಂಬಂಧವನ್ನು ಮುಂದುವರೆಸುವಂತೆ ಕೇಳಿದ್ದಾನೆ. ಈ ಮಧ್ಯೆ ಐಶ್ವರ್ಯ ತಂದೆ
ಶಕ್ತಿವೇಲು ಶಂಕಿತನಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಶಂಕಿತ ರಾತೀಶ್ , ತಂದೆ ಹಾಗೂ ಮಗಳಿಗೆ ಚಾಕುವಿಂದ ಇರಿದು ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಇಬ್ಬರನ್ನು ಕೊಯಂಬತ್ತೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಇಂದು  ಮೃತಪಟ್ಟಿದ್ದಾಳೆ.

ಈ ಮಧ್ಯೆ ರಾತೀಶ್ ವಿರುದ್ಧ ಪೆರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT