ದೇಶ

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಮಾಯಾವತಿ ಆಗ್ರಹ

Raghavendra Adiga

ಲಖನೌ: ಬಹುಜನ ಸಮಾಜವಾದಿ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ  ಸಚಿನ್ ಪೈಲಟ್ ನಡುವಿನ ತಿಕ್ಕಾಟದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದ್ದು ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬೇಕೆಂದು ಮಾಯಾವತಿ ಒತ್ತಾಯಿಸಿದ್ದಾರೆ. 

ರಾಜ್ಯದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಅಧಿಕಾರವನ್ನು ಕುಟುಕಿದ ಮಾಯಾವತಿ  ಇದು ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲಂಘಿಸಿದೆ. ಅಲ್ಲದೆ ಒಕ್ಕೂಟ ವ್ಯವಸ್ಥೆಗೆ ದ್ರೋಹವೆಸಗಲಾಗಿದೆ ಎಂದು ಆರೋಪಿಸಿದರು.

ಮೊದಲಿಗೆ ಬಿಎಸ್ಪಿ ಶಾಸಕರನ್ನು ಕಾಂಗ್ರೆಸ್ಸಿಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಮತ್ತೆ ಈಗ ದೂರವಾಣಿಯನ್ನು ಟ್ಯಾಪ್ ಮಾಡುವ ಮೂಲಕ ಗೆಹ್ಲೋಟ್ ಅಧಿಕಾರ ದ್ರೋಹ ಮಾಡಿದ್ದಾರೆ ಎಂದು ಮಾಯಾವತಿ ಆರೋಪಿಸಿದರು, ಇದು ಸ್ಪಷ್ಟವಾಗಿ ಮತ್ತೊಂದು ಕಾನೂನುಬಾಹಿರ ಮತ್ತು ಅಸಂವಿಧಾನಿಕ ಕೆಲಸವಾಗಿದೆ. "ರಾಜಸ್ಥಾನದ ರಾಜ್ಯಪಾಲರು ನಡೆಯುತ್ತಿರುವ ರಾಜಕೀಯ ಅಸ್ಥಿರತೆಅವಾಂತರಗಳನ್ನು ಮನಗಂಡು  ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರಲು ಶಿಫಾರಸು ಮಾಡಬೇಕು" ಬಿಎಸ್ಪಿ  ಮುಖ್ಯಸ್ಥೆ ಹೇಳಿದ್ದಾರೆ.

SCROLL FOR NEXT