ದೇಶ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು- ರಂಗ ಪ್ರವೇಶಿಸಿದ ಅಮಿತ್ ಶಾ

Srinivas Rao BV

ನವದೆಹಲಿ: ರಾಜಸ್ಥಾನ ರಾಜ್ಯ ರಾಜಕೀಯದಲ್ಲಿ    ಉದ್ಭವವಾಗಿರುವ ಬಿಕ್ಕಟ್ಟು, ಈಗ ರಾಷ್ಟ್ರೀಯ ಮಟ್ಟದಲ್ಲಿ   ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ಖುದ್ದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಮ್ಮ ಸರ್ಕಾರವನ್ನು ಉರುಳಿಸಲು ಪಕ್ಷದ ಶಾಸಕರೊಂದಿಗೆ ಚೌಕಾಸಿಗಿಳಿದಿದ್ದಾರೆ ಎಂಬ ಕಾಂಗ್ರೆಸ್   ಹೇಳಿಕೆ ಸಂಚಲನ ಸೃಷ್ಟಿಸಿದೆ. 

ಮತ್ತೊಂದೆಡೆ ಕೇಂದ್ರ ಸಚಿವ ಗಜೇಂದ್ರ ಸಿಂಗ್  ಶೇಖಾವತ್ ಹಾಗೂ ಇತರ ಇಬ್ಬರು ನಾಯಕರ ವಿರುದ್ಧ  ರಾಜಸ್ಥಾನ ಸರ್ಕಾರ ಈಗಾಗಲೇ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಇತ್ತೀಚಿನ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ದೂರವಾಣಿ ಕದ್ದಾಲಿಕೆ ಆರೋಪಗಳಿಗೆ  ಸಂಬಂಧಿಸಿದಂತೆ ಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಭಾನುವಾರ  ಆದೇಶಿಸಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯ  ಬೆಳವಣಿಗೆಗಳು ಕುತೂಹಲ ಮೂಡಿಸಿದೆ.

SCROLL FOR NEXT