ದೇಶ

ಪಶ್ಚಿಮ ಬಂಗಾಳದಲ್ಲಿ ವಾರದಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ದೀದಿ ಸರ್ಕಾರ

Lingaraj Badiger

ಕೋಲ್ಕತಾ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ವಾರದಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದೆ.

ಈ ವಾರದಿಂದಲೇ ಲಾಕ್ ಡೌನ್ ಜಾರಿಗೆ ಬರಲಿದ್ದು, ಜುಲೈ 23 ಮತ್ತು ಜುಲೈ 25 ರಂದು ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು. ಎರಡು ದಿನ ಅಗತ್ಯ ಸೇವೆ ಹೊರತುಪಡಿಸಿ, ಸಾರಿಗೆ ಹಾಗೂ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ಪಶ್ಚಿಮ ಬಂಗಾಳ ಗೃಹ ಕಾರ್ಯದರ್ಶಿ ಅಲಪನ್ ಬಂಡೋಪಧ್ಯಾಯ ಅವರು ಹೇಳಿದ್ದಾರೆ.

ಮುಂದಿನ ವಾರ, ಜುಲೈ 29 ರಂದು ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ.

ಉಳಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ, ಕಂಟೈನ್ ಮೆಂಟ್ ಜೋನ್ ಗಳಲ್ಲಿ ಸಂಪೂರ್ಣ ಲಾಕ್ ಡೌನ್ ಮುಂದುವರೆಯಲಿದೆ ಎಂದು ಬಂಡೋಪಧ್ಯಾಯ ಹೇಳಿದ್ದಾರೆ.

SCROLL FOR NEXT