ಉಮಾ ಭಾರತಿ, ಶರದ್ ಪವಾರ್ 
ದೇಶ

ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

 ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್  ಆಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಬಹುದು ಎಂದು ಹೇಳಿದ ಬೆನ್ನಲ್ಲೇ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಶರದ್ ಪವಾರ್ ಭಾನುವಾರ ಲೇವಡಿ ಮಾಡಿದ್ದರು.

ಶರದ್ ಪವಾರ್ ಹೇಳಿಕೆ  ಭಗವಾನ್ ರಾಮನಿಗೆ ಮಾಡಿರುವ ದ್ರೋಹದ ಹೇಳಿಕೆಯಾಗಿದೆ. ಅದು ಮೋದಿಯ ವಿರುದ್ಧ ಅಲ್ಲ, ರಾಮನ ವಿರುದ್ಧ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಬಂದರೆ ಹೇಗೆ ಆರ್ಥಿಕತೆ ಹಾಳಾಗಲಿದೆ ಎಂದು ಉಮಾ ಭಾರತಿ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ರಜೆ ತೆಗೆದುಕೊಂಡಿಲ್ಲ. ಅವರ ವರ್ತನೆ ಗೊತ್ತು.
ವಿಮಾನದಲ್ಲಿ ಹೋಗುವಾಗ, ಬರುವಾಗಲೇ ಫೈಲ್‌ಗಳನ್ನು ತೆರವುಗೊಳಿಸುತ್ತಾರೆ.  ರಾಮನಿಗಾಗಿ ಅವರು ಎರಡು ಗಂಟೆಗಳನ್ನು ನೀಡಲಿದ್ದಾರೆ ಎಂದು ಉಮಾ ಭಾರತಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!