ಸಚಿನ್ ಪೈಲಟ್ 
ದೇಶ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಬಂಡಾಯ ಶಾಸಕರ ಅನರ್ಹತೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿದೆ.

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿದೆ. ಅಲ್ಲದೆ ಅಲ್ಲಿಯವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸ್ಪೀಕರ್ ಸಿ. ಪಿ. ಜೋಷಿ ಅವರಿಗೆ ಸೂಚಿಸಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಆಗಿದ್ದ ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಸಿ. ಪಿ. ಜೋಷಿ ಅವರು ನೋಟಿಸ್ ನೀಡಿದ್ದು, ಇದನ್ನು ಪ್ರಶ್ನಿಸಿ ಪೈಲಟ್ ಬಣ ಹೈಕೋರ್ಟ್ ಮೆಟ್ಟಿಲೇರಿದೆ. 

ಬಂಡಾಯ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಇಂದ್ರಜೀತ್ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಕಾಶ್ ಗುಪ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ, ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದೆ.

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ ಮತ್ತು ಶುಕ್ರವಾರದವರೆಗೆ ಯಾವುದೇ ಆದೇಶ ನೀಡದಂತೆ ಸ್ಪೀಕರ್ ಗೆ ಮನವಿ ಮಾಡಿದೆ ಎಂದು ಸ್ಪೀಕರ್ ಸಿಪಿ ಜೋಷಿ ಅವರ ಪರ ವಕೀಲರು ತಿಳಿಸಿದ್ದಾರೆ.

ಇಂದು ಸಚಿನ್ ಪೈಲಟ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಸ್ಪೀಕರ್ ಅವರು ಅನರ್ಹತೆಯ ನೋಟಿಸ್ ಜಾರಿಗೊಳಿಸುವ ಮೊದಲು ತಮ್ಮ ತೆಲೆಗೆ ಸ್ವಲ್ಪವೂ ಕೆಲಸ ಕೊಟ್ಟಂತೆ ಕಾಣುತ್ತಿಲ್ಲ. ನೋಟಿಸ್ ಗೆ ಉತ್ತರಿಸಲು ಸಾಕಷ್ಟು ಕಾಲಾವಕಾಶ ನೀಡುವ ಅಗತ್ಯವಿತ್ತು ಎಂದಿದ್ದಾರೆ.

ವಿಧಾನಸಭೆ ಅಧಿವೇಶನ ನಡೆದ ಸಂದರ್ಭದಲ್ಲಿ ಮಾತ್ರ ವಿಪ್‌ ಅನ್ವಯವಾಗುತ್ತದೆ. ಹೀಗಾಗಿ ಸ್ಪೀಕರ್ ನೀಡಿರುವ ಈ ನೋಟಿಸ್‌ಗೆ ಯಾವುದೇ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು  ಪೈಲಟ್ ಬಣದ ಪರ ವಕೀಲ ಹರೀಶ್ ಸಾಳ್ವೆ ಅವರು ನಿನ್ನೆ ವಾದಿಸಿದ್ದರು.

ಸಚಿನ್‌ ಪೈಲಟ್‌ ಪರ ಹರೀಶ್‌ ಸಾಳ್ವೆ ಮತ್ತು ಮುಕುಲ್‌ ರೋಹಟಗಿ ವಾದ ಮಂಡಿಸಿದರೆ, ಕಾಂಗ್ರೆಸ್‌ ಸರ್ಕಾರದ ಪರ ಮತೋರ್ವ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ