ಆರೋಪಿ ನಳಿನಿ 
ದೇಶ

ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ
ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ 30 ವರ್ಷಗಳ ಜೈಲುವಾಸದ ಸಂದರ್ಭದಲ್ಲಿ ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ . ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವೆಲ್ಲೂರ್ ಜೈಲು ಆಕೆಗೆ ಸುರಕ್ಷಿತವಾಗಿಲ್ಲ, ಆಕೆಯನ್ನು ಪುಝಲ್ ಕಾರಾಗೃಹಕ್ಕೆ ರವಾನಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ನಳಿನಿ ಪರ ವಕೀಲರು ಹೇಳಿದ್ದಾರೆ.

ನಳಿನಿ ಪತಿ ಮುರುಗನ್ ಸಹ ಇದೇ ಕಾರಾಗೃಹದಲ್ಲಿದ್ದು, ತನ್ನ ಪತ್ನಿಯನ್ನು ಬೇರೆ ಜೈಲಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.ಶೀಘ್ರದಲ್ಲಿಯೇ  ಕಾನೂನು ರೀತಿಯ ಇಬ್ಬರ ಮನವಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್ ಸೇರಿ ಏಳು ಜನರಿಗೆ ವಿಶೇಷ ಟಾಡಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT