ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಸೇನೆ ದಾಳಿ: ಶಸ್ತ್ರಾಸ್ತ್ರ, ಸ್ಫೋಟಕ ಸಾಮಾಗ್ರಿಗಳು ವಶ
ಜಮ್ಮು ಮತ್ತು ಕಾಶ್ಮೀರ ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ 38 ರಾಷ್ಟ್ರೀಯ ರೈಫಲ್ಸ್ ಸೇನಾಪಡೆಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಜೌರಿಯಲ್ಲಿ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ 38 ರಾಷ್ಟ್ರೀಯ ರೈಫಲ್ಸ್ ಸೇನಾಪಡೆಗಳು ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಬುಧವಾರ ತಿಳಿದುಬಂದಿದೆ.
ರಜೌರಿಯ ಠಾಣಾಮಂಡಿ ಎಂಬ ಪ್ರದೇಶದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ನಡೆಸಿದ್ದು, 1 ಗನ್, ಚೀನಾ ಮೂಲದ 1 ಪಿಸ್ತೂಲ್, 168 ಸುತ್ತಿನ ಗುಂಡು, ಎಕೆ 47, 2 ಯುಬಿಜಿಎಲ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಠಾಣಾಮಂಡಿಯಲ್ಲಿ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಟ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಗಳು ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿತ್ತು. ಇದರಂತೆ ದಾಳಿ ನಡೆಸಿ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಸೇನಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.