ಪತ್ರಕರ್ತ ವಿಕ್ರಮ್ ಜೋಶಿ(ಸಂಗ್ರಹ ಚಿತ್ರ) 
ದೇಶ

ಗಜಿಯಾಬಾದ್: ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಪತ್ರಕರ್ತ ವಿಕ್ರಮ್ ಜೋಶಿ ಸಾವು

ಕಳೆದ ಸೋಮವಾರ ರಾತ್ರಿ ದೆಹಲಿ ಹತ್ತಿರ ಗಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಗ್ಗೆ ಅಸುನೀಗಿದ್ದಾರೆ.

ಗಜಿಯಾಬಾದ್: ಕಳೆದ ಸೋಮವಾರ ರಾತ್ರಿ ದೆಹಲಿ ಹತ್ತಿರ ಗಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ ಸೋಮವಾರ ರಾತ್ರಿ ವಿಕ್ರಮ್ ಜೋಶಿ ಅವರ ನಿವಾಸದ ಎದುರು ಇಬ್ಬರು ಪುತ್ರಿಯರ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ತನ್ನ ಇಬ್ಬರು ಪುತ್ರಿಯರೊಂದಿಗೆ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವಿಕ್ರಮ್ ಜೋಶಿಯವರ ಮೇಲೆ ದುಷ್ಕರ್ಮಿಗಳ ಗುಂಪು ಬಂದು ಗುಂಡಿಕ್ಕಿ ಏಕಾಏಕಿ ದಾಳಿ ನಡೆಸಿತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಗಂಭೀರವಾಗಿ ಗಾಯಗೊಂಡಿದ್ದರಿಂದ ಬದುಕುಳಿಯಲಿಲ್ಲ.

ವಿಕ್ರಮ್ ಜೋಶಿಯವರ ತಲೆಗೆ ಗಂಭೀರ ಗಾಯವಾಗಿದ್ದರಿಂದ ಬದುಕುಳಿಯಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ವಿಕ್ರಮ್ ಜೋಶಿ ಜನ ಸಾಗರ ಟುಡೆಯಲ್ಲಿ ಪತ್ರಕರ್ತರಾಗಿದ್ದರು.

9 ಮಂದಿ ಬಂಧನ: ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ 9 ಮಂದಿಯನ್ನು ಬಂಧಿಸಿದ್ದಾರೆ. ಇಬ್ಬರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕುಟುಂಬ ಸದಸ್ಯರೊಬ್ಬರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವಿಕ್ರಮ್ ಜೋಶಿ ದೂರು ನೀಡಿದ್ದ ನಾಲ್ಕು ದಿನಗಳ ನಂತರ ಅವರ ಮೇಲೆ ದಾಳಿ ನಡೆದಿತ್ತು.

ಪೊಲೀಸರ ಹೇಳಿಕೆ: ಪ್ರಕರಣ ಸಂಬಂಧ ಮುಖ್ಯ ಆರೋಪಿಗಳಾದ ರವಿ ಮತ್ತು ಚೊಟು ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿದೆ. ಸ್ಥಳದಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಕಳಾನಿಧಿ ನೈತಾನಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT