ದೇಶ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಪ್ರಧಾನಿ ಮೋದಿ ಶಿಲಾನ್ಯಾಸ

Lingaraj Badiger

ಪುಣೆ: ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು ಬುಧವಾರ ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಖಚಿತಪಡಿಸಿಕೊಳ್ಳಲು, 150 ಆಹ್ವಾನಿತರು(ಸಮಾರಂಭದಲ್ಲಿ) ಸೇರಿದಂತೆ 200 ಕ್ಕೂ ಹೆಚ್ಚು ಜನರಿಗೆ ಅವಕಾಶ ಇರುವುದಿಲ್ಲ ಎಂದರು.

ಪ್ರಧಾನಿ ಮೋದಿ ಆಗಸ್ಟ್ 5ರಂದು ಬೆಳಗ್ಗೆ ಹನುಮಾನ್ ಗರ್ಹಿ, ರಾಮ್ ಲಲ್ಲಾ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಬಳಿಕ ಮರ ನೆಡುತ್ತಾರೆ ಮತ್ತು ನಂತರ ರಾಮ ಮಂದಿರ ನಿರ್ಮಾಣದ 'ಭೂಮಿ ಪೂಜೆ' ನೆರವೇರಿಸಲಿದ್ದಾರೆ ಎಂದು ಅವರು ಹೇಳಿದರು.

ಅಯೋಧ್ಯೆಯ ರಾಮ ಮಂದಿರದ ನಿರ್ಮಾಣ ಕಾರ್ಯವು ಆಗಸ್ಟ್‌ 5 ರಿಂದ ಆರಂಭವಾದರೂ ಕೂಡ ದೇವಾಲಯವನ್ನು ಸಂಪೂರ್ಣಗೊಳಿಸಲು ಸರಿಸುಮಾರು ಮೂರರಿಂದ ಮೂರುವರೆ ವರ್ಷಗಳು ಬೇಕಾಗಬಹುದೆಂದು ಅಂದಾಜಿಸಲಾಗಿದೆ.

SCROLL FOR NEXT