ಅಶೋಕ್ ಗೆಹ್ಲೋಟ್ 
ದೇಶ

ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ವಿಧಿವಿಜ್ಞಾನ ಪರೀಕ್ಷೆಗೆ ವಿದೇಶಕ್ಕೆ ಕಳುಹಿಸಿ: ರಾಜಸ್ಥಾನ ಸಿಎಂ

ಜನರಿಂದ ಚುನಾಯಿತರಾದ ಸರ್ಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ಅದನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ವಿದೇಶಕ್ಕೆ ಕಳುಹಿಸಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ.

ಜೈಪುರ: ಜನರಿಂದ ಚುನಾಯಿತರಾದ ಸರ್ಕಾರವನ್ನು ಉರುಳಿಸುವ ಪ್ರಯತ್ನಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಅಸಲಿಯಾಗಿದ್ದು, ಬೇಕಾದರೆ ಅದನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ವಿದೇಶಕ್ಕೆ ಕಳುಹಿಸಲಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿರುಗೇಟು ನೀಡಿದ್ದಾರೆ.

'ಅವರು ಏಕೆ ತಮ್ಮ ಧ್ವನಿ ಮಾದರಿ ನೀಡಲು ಮುಂದೆ ಬರುತ್ತಿಲ್ಲ?' ಎಂದು ನೇರವಾಗಿ ಕೇಂದ್ರ ಸಚಿವರ ಹೆಸರು ಹೇಳದೆ ಗೆಹ್ಲೋಟ್ ಅವರು ಶೇಖಾವತ್ ಅವರನ್ನು ಪ್ರಶ್ನಿಸಿದ್ದಾರೆ.

ನಕಲಿ ಆಡಿಯೋ ಕ್ಲಿಪ್ ಸಿದ್ಧಪಡಿಸಲಾಗಿದೆ ಎಂದು ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಾಜಸ್ಥಾನ ಸಿಎಂ, ಅವರಿಗೆ ಅನುಮಾನವಿದ್ದರೆ ಆಡಿಯೋ ಕ್ಲಿಪ್ ಅನ್ನು ಯಾವುದೇ ವಿಧಿವಿಜ್ಞಾನ ಪ್ರಯೋಗಾಲದಲ್ಲೂ ಪರೀಕ್ಷಿಸಬಹುದು ಎಂದಿದ್ದಾರೆ.

ರಾಜಸ್ಥಾನ ಸರ್ಕಾರದ ಮೇಲೆ ಅವರಿಗೆ ನಂಬಿಕೆ ಇಲ್ಲದಿದ್ದರೆ ಆ ಆಡಿಯೋ ಕ್ಲಿನ್ ಅನ್ನು ನಾವು ಅಮೆರಿಕದ ಪ್ರಯೋಗಾಲದಲ್ಲಿ ಪರೀಕ್ಷಿಸಲು ಸಿದ್ಧರಿದ್ದೇವೆ. ಆದರೆ ಅವರು ಏಕೆ ಧ್ವನಿ ಮಾದರಿ ನೀಡುತ್ತಿಲ್ಲ? ಅವರು ಮುಂದೆ ಬಂದು ಧ್ವನಿ ಮಾದರಿ ನೀಡಲಿ ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಈ ಸಂಬಂಧ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಗೆಹ್ಲೋಟ್, ರಾಜಸ್ಥಾನದಲ್ಲಿ ವಾಮ ಮಾರ್ಗದ ಮೂಲಕ ಸರ್ಕಾರ ಉರುಳಿಸುವ ಯತ್ನ ನಡೆದಿದ್ದು, ಇದರಲ್ಲಿ ಕೇಂದ್ರ ಸಚಿವರ ಪಾತ್ರವೂ ಇದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ