ವಿಕ್ರಮ್ ಜೋಷಿ 
ದೇಶ

ಪತ್ರಕರ್ತ ವಿಕ್ರಮ್ ಜೋಷಿ ಸಾವು: ನಿರ್ಲಕ್ಷ್ಯಕ್ಕಾಗಿ ಪೊಲೀಸ್ ಅಧಿಕಾರಿ ಸಸ್ಪೆಂಡ್

ಪತ್ರಕರ್ತ ವಿಕ್ರಮ್ ಜೋಷಿ ಸಾವಿನ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಪೊಲೀಸ್ ಠಾಣೆ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಗಾಜಿಯಾಬಾದ್: ಪತ್ರಕರ್ತ ವಿಕ್ರಮ್ ಜೋಷಿ ಸಾವಿನ ಪ್ರಕರಣ ಸಂಬಂಧ ನಿರ್ಲಕ್ಷ್ಯ ತೋರಿದ ಪೊಲೀಸ್ ಠಾಣೆ ಉಸ್ತುವಾರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಇನ್ನೂ ಪ್ರಕರಣವನ್ನು ವಿಜಯನಗರ ಪೊಲೀಸ್ ಠಾಣೆಯಿಂದ ಕೊಟ್ವಾಲಿ ಠಾಣೆಗೆ ವರ್ಗಾಯಿಸಲಾಗಿದೆ ಎಂದು  ಗಾಜಿಯಾಬಾದ್ ಎಸ್ ಪಿ ಕಲಾನಿದಿ ನೈತಾನಿ ಹೇಳಿದ್ದಾರೆ. ಪ್ರಕರಣದ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ನೀಡಿದ ವರದಿ ಆಧರಿಸಿ ಕ್ರಮ ಜರುಗಿಸಲಾಗಿದೆ,

ಗಾಜಿಯಾಬಾದ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಪತ್ರಕರ್ತ ವಿಕ್ರಮ್ ಜೋಶಿ ಬುಧವಾರ ಬೆಳಗ್ಗೆ ನಿಧನರಾಗಿದ್ದರು. ತನ್ನ ಇಬ್ಬರು ಪುತ್ರಿಯರೊಂದಿಗೆ ಬೈಕ್ ನಲ್ಲಿ ಮನೆಗೆ ಬರುತ್ತಿದ್ದ ವಿಕ್ರಮ್ ಜೋಶಿಯವರ ಮೇಲೆ ದುಷ್ಕರ್ಮಿಗಳ ಗುಂಪು ಬಂದು ಗುಂಡಿಕ್ಕಿ ಏಕಾಏಕಿ ದಾಳಿ ನಡೆಸಿತು.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಗಂಭೀರವಾಗಿ ಗಾಯಗೊಂಡಿದ್ದರಿಂದ ಬದುಕುಳಿಯಲಿಲ್ಲ. ತಾವು ದೂರು ನೀಡಿದರು ಪೊಲೀಸರು  ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಮೃತ ಪತ್ರಕರ್ತನ ಸಂಬಂಧಿಕರು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT