ದೇಶ

ನಮ್ಮ ಸರ್ಕಾರಕ್ಕೆ ಬಹುಮತ ಇದೆ, ತನಿಖಾ ಸಂಸ್ಥೆಗಳ ದಾಳಿಗೆ ಹೆದರುವುದಿಲ್ಲ: ಅಶೋಕ್ ಗೆಹ್ಲೋಟ್

Sumana Upadhyaya

ಜೈಪುರ/ನವದೆಹಲಿ: ಮೊನ್ನೆ ಜೋಧ್ ಪುರದಲ್ಲಿ ತಮ್ಮ ಸೋದರನ ಕಂಪೆನಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದರೂ, ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾದರೂ ಕೂಡ, ಕಾಂಗ್ರೆಸ್ ಕೇಂದ್ರ ತನಿಖಾ ಸಂಸ್ಥೆಗಳ ಇಂತಹ ದಾಳಿಗಳಿಗೆಲ್ಲ ಹೆದರುವುದಿಲ್ಲ, ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುನರುಚ್ಛರಿಸಿದ್ದಾರೆ.

ನಿನ್ನೆ ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಗೆಹ್ಲೋಟ್ , ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಇಡಿ, ಸಿಬಿಐ ಮತ್ತು ಐಟಿ ಇಲಾಖೆಗಳು ಸಕ್ರಿಯವಾಗಿ ನಮ್ಮ ರಾಜ್ಯದಲ್ಲಿ ದಾಳಿ ಮಾಡುತ್ತಿರಬಹುದು, ಆದರೆ ಅದಕ್ಕೆ ಹೆದರುವುದಿಲ್ಲ ಎಂದರು.

ಇಂತವರು ಪ್ರಜಾಪ್ರಭುತ್ವವನ್ನು ಹಾಳು ಮಾಡಲು ನೋಡುತ್ತಿದ್ದಾರೆ. ನಮ್ಮ ಸಹೋದ್ಯೋಗಿಗಳಿಗೆ ತಪ್ಪು ಮಾಹಿತಿ ನೀಡಬಹುದು ಆದರೆ ಜನರು ಅವರನ್ನೆಂದಿಗೂ ಕ್ಷಮಿಸುವುದಿಲ್ಲ ಎಂದು ಸರ್ಕಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಹೇಳಿದರು.

SCROLL FOR NEXT